ಕೊರೋನಾ ವಿಪತ್ತು: ರೂ.200 ಕೋಟಿ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ
ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಉಡುಪಿ: ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳು ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ ಕೊಡವೂರು ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ಮಾಸಿಕ ಅಂದಾಜು ರೂ.35 ಲಕ್ಷ ನಿರ್ವಹಣಾ ವೆಚ್ಚವಾಗುತ್ತಿದೆ. ಅದೇ ರೀತಿಯಲ್ಲಿ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ ದೇವಳ ಹಾಗೂ ಮಹನೀಯರು ಯಾವದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತ ಗೋವುಗಳನ್ನು ಪೋಷಣೆ ಮಾಡುತ್ತಿದ್ದಾರೆ.
ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ, ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಮೇಲಾಗಿ ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ. ಆದ್ದರಿಂದ ಕೊರೋನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರ್ಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಟ ರೂ.200 ಕೋಟಿಯಾದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮ ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಶ್ರೀಗಳು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


