ಕಬ್ಬು ಅರೆವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.
ವೆಲ್ಡ್ ಮಾಡಲು ಯತ್ನಿಸುತ್ತಿದ್ದಾಗ ಕಬ್ಬಿನ ಪುಡಿಮಾಡುವ ಯಂತ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಕಾರ್ಮಿಕನನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಮೃತ್ ಕುಮಾರ್ (33) ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ ಈತ, ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಕಬ್ಬು ನುರಿಸುವ ಯಂತ್ರದ ಚಾವಣಿಗೆ ಅವರು ವೆಲ್ಡಿಂಗ್ ಮಾಡುತ್ತಿದ್ದರು. ಡಿವೈಎಸ್‌ಪಿ ಪ್ರಭಾಕರರಾವ್ ಶಿಂಧೆ, ಸಿಪಿಐ ಲಕ್ಷ್ಮೀಕಾಂತ್ ಕೆ.ತಳವಾರ್, ಬಿಳಿಗೆರೆ ಠಾಣೆಯ ಎಸ್.ಐ ಆಕಾಶ್ ಕಾರ್ಖಾನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ 8 ಗಂಟೆಯಾದರೂ ದೂರು ದಾಖಲಾಗಿಲ್ಲ ಎಂಬುದು ಗೊತ್ತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


