ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 14 ವಿದೇಶಿ ಸ್ಥಳಗಳಿಗೆ ವಿಮಾನ ಸೇವೆ
ಕೊರೋನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಜನರ ಪ್ರಯಾಣಕ್ಕೆ ಸಹಾಯ ಮಾಡಲು ಸರ್ಕಾರದ ವಿವಿಧ ಉಪ ಕ್ರಮಗಳಡಿಯಲ್ಲಿ 13 ಅಂತಾರಾಷ್ಟ್ರೀಯ ವಿಮಾನಯಾನ ಕಂಪೆನಿಗಳು 14 ವಿದೇಶಿ ಸ್ಥಳಗಳಿಗೆ ವಿಮಾನ ಕಾರ್ಯಾಚರಣೆ ಆರಂಭಿಸಲಿವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳವಾರ ತಿಳಿಸಿದೆ.

ಬೆಂಗಳೂರು: ಕೊರೋನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಜನರ ಪ್ರಯಾಣಕ್ಕೆ ಸಹಾಯ ಮಾಡಲು ಸರ್ಕಾರದ ವಿವಿಧ ಉಪ ಕ್ರಮಗಳಡಿಯಲ್ಲಿ 13 ಅಂತಾರಾಷ್ಟ್ರೀಯ ವಿಮಾನಯಾನ ಕಂಪೆನಿಗಳು 14 ವಿದೇಶಿ ಸ್ಥಳಗಳಿಗೆ ವಿಮಾನ ಕಾರ್ಯಾಚರಣೆ ಆರಂಭಿಸಲಿವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳವಾರ ತಿಳಿಸಿದೆ.
ಅಂತಾರಾಷ್ಟ್ರೀಯ ಸ್ಥಳಾಂತರ ವಿಮಾನಗಳು, ವಂದೇ ಭಾರತ್ ಮಿಷನ್ ಮತ್ತು ವಾಯು ಬಬಲ್ ಒಪ್ಪಂದಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರನ್ನು 14 ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ಮರುಸಂಪರ್ಕಿಸಲು ಅನುವು ಮಾಡಿಕೊಟ್ಟಿವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಪ್ರಕಟಣೆಯಲ್ಲಿ ತಿಳಿಸಿದೆ.
ಈ ವಿವಿಧ ವ್ಯವಸ್ಥೆಗಳಡಿಯಲ್ಲಿ 13 ವಿಮಾನಯಾನ ಸಂಸ್ಥೆಗಳು ಬೆಂಗಳೂರು ವಿಮಾನ ನಿಲ್ದಾಣದಿಂದ ಈ ವಲಯಗಳಲ್ಲಿ ಕಾರ್ಯನಿರ್ವಹಿಸಲಿವೆ.ಅಬುಧಾಬಿ, ಆಮ್ ಸ್ಟರ್ ಡ್ಯಾಮ್ , ದುಬೈ, ದೋಹಾ, ಫ್ರಾಂಕ್ ಫರ್ಟ್, ಕುವೈತ್, ಕೌಲಾಲಂಪುರ್, ಲಂಡನ್, ಮಸ್ಕತ್, ನರಿಟಾ, ಪ್ಯಾರಿಸ್, ರಿಯಾದ್, ಸಿಂಗಾಪುರ ಮತ್ತು ಸ್ಯಾನ್ ಫ್ರಾನ್ಸಿಸ್ಕೊ ಈ ಸ್ಥಳಗಳಾಗಿವೆ ಎಂದು ಬಿಐಎಎಲ್
ತಿಳಿಸಿದೆ.
ವಿಮಾನಗಳನ್ನು ನಿರ್ವಹಿಸಲಿರುವ ವಿಮಾನಯಾನ ಸಂಸ್ಥೆಗಳಲ್ಲಿ ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ ಪ್ರೆಸ್, ಇಂಡಿಗೊ, ಗೋಏರ್, ವಿಸ್ಟಾರ, ಎತಿಹಾದ್ ಮತ್ತು ಎಮಿರೇಟ್ಸ್ ಸೇರಿವೆ.ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮಾರ್ಚ್ 23 ರಿಂದ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳು ಸ್ಥಗಿತಗೊಂಡಿವೆ.
ಆದರೂ, ವಿಶೇಷ ಸ್ಥಳಾಂತರ ವಿಮಾನಗಳು ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಅನುಮತಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


