ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾಗೆ ಕೊರೋನಾ ಪಾಸಿಟಿವ್
ಬಯೊಕಾನ್ ಸಂಸ್ಥೆಯ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.ನನಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಸಣ್ಣಮಟ್ಟಿನ ರೋಗಲಕ್ಷಣವಿದೆ ಎಂದು ಕಿರಣ್ ಮಜುಂದಾರ್ ಶಾ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಬೆಂಗಳೂರು: ಬಯೊಕಾನ್ ಸಂಸ್ಥೆಯ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ನನಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಸಣ್ಣಮಟ್ಟಿನ ರೋಗಲಕ್ಷಣವಿದೆ ಎಂದು ಕಿರಣ್ ಮಜುಂದಾರ್ ಶಾ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯೇನು ಆಗುತ್ತಿಲ್ಲ. ಇದುವರೆಗೆ ನಗರದಲ್ಲಿ ಒಟ್ಟು 91 ಸಾವಿರದ 864 ಸೋಂಕಿತರಿದ್ದಾರೆ, ಅವರಲ್ಲಿ ನಿನ್ನೆ 6 ಸಾವಿರದ 317 ಹೊಸ ಪ್ರಕರಣಗಳು ವರದಿಯಾಗಿದ್ದು ಬೆಂಗಳೂರು ನಗರವೊಂದರಲ್ಲಿಯೇ ನಿನ್ನೆ 2 ಸಾವಿರದ 053 ಕೊರೋನಾ ಸೋಂಕಿತ ಪ್ರಕರಣ ವರದಿಯಾಗಿದೆ.
ನಿನ್ನೆಯ ಹೊತ್ತಿಗೆ ಕರ್ನಾಟಕದಲ್ಲಿ 2 ಲಕ್ಷದ 33 ಸಾವಿರದ 283 ಸೋಂಕಿತ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ 4 ಸಾವಿರದ 062 ಮಂದಿ ನಿಧನ ಹೊಂದಿದ್ದಾರೆ. 1 ಲಕ್ಷದ 48 ಸಾವಿರದ 562 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಅಂಕಿಅಂಶ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


