ರಾಜ್ಯದ ಇನ್ನೊಬ್ಬ ಸಂಸದರಿಗೂ ಕೊರೋನಾ ಪಾಸಿಟಿವ್
ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಂತರ ಇದೀಗ ರಾಜ್ಯದ ಇನ್ನೊಬ್ಬಸಂಸದರಿಗೂ ಕೋವಿಡ್ ಸೋಂಕು ದೃಢವಾಗಿದೆ.

ಕೊಪ್ಪಳ: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಂತರ ಇದೀಗ ರಾಜ್ಯದ ಇನ್ನೊಬ್ಬಸಂಸದರಿಗೂ ಕೋವಿಡ್ ಸೋಂಕು ದೃಢವಾಗಿದೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರಿಗೆ ಕೊರೋನಾವೈರಸ್ ಸೋಂಕು ದೃಢವಾಗಿದ್ದು ಅದರ ಸಂಬಂಧ ಸಂಸದ ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
"ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ.
"ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ.
"ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು." ಸಂಸದ ಕರಡಿ ಟ್ವೀಟ್ ಮೂಲಕ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


