ರಾಜ್ಯ

ಕೋವಿಡ್ ಪರೀಕ್ಷಾ ವರದಿಗಾಗಿ ಆಸ್ಪತ್ರೆ ಸುತ್ತಬೇಡಿ, ಇನ್ಮುಂದೆ ಆನ್‌ಲೈನ್‌ನಲ್ಲೇ ಪರೀಕ್ಷಾ ವರದಿ: ಸುಧಾಕರ್

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ಕೋವಿಡ್ ಪರೀಕ್ಷಾ ವರದಿಗಾಗಿ ಆಸ್ಪತ್ರೆ ಸುತ್ತಬೇಡಿ, ಇನ್ಮುಂದೆ ಆನ್‌ಲೈನ್‌ನಲ್ಲೇ ಪರೀಕ್ಷಾ ವರದಿ: ಸುಧಾಕರ್
ಕೆ ಸುಧಾಕರ್
Published On :

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.

ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು" ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.

ಆನ್ ಲೈನ್ ನಲ್ಲೇ ವರದಿ
ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್‍ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.