ಬೆಂಗಳೂರು ಗಲಭೆಯಲ್ಲಿ ನಿಜವಾಗಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಆಯುಕ್ತರಿಗೆ ಮುಸ್ಲಿಂ ಮುಖಂಡರು
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸದೆ, ಗಲಭೆಯಲ್ಲಿ ನಿಜವಾಗಿಯೂ ಭಾಗಿಯಾಗಿದ್ದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಸ್ಲಿಂ ಮುಖಂಡರ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರನ್ನು ಭೇಟಿಯಾಗಿ ಮನವಿ ಮಾಡಿತು.

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸದೆ, ಗಲಭೆಯಲ್ಲಿ ನಿಜವಾಗಿಯೂ ಭಾಗಿಯಾಗಿದ್ದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಸ್ಲಿಂ ಮುಖಂಡರ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರನ್ನು ಭೇಟಿಯಾಗಿ ಮನವಿ ಮಾಡಿತು.
ಮಂಗಳವಾರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ನಿಯೋಗವು ಗಲಭೆ ಕುರಿತು ಪಾರದರ್ಶಕ ತನಿಖೆ ನಡೆಸಬೇಕು. ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳ ಜೊತೆಯಲ್ಲಿ ಅಮಾಯಕರನ್ನೂ ಬಂಧನಕ್ಕೊಳಪಡಿಸಲಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಬಳಿಕ ಮಾತನಾಡಿದ ವಿಧಾನ ಪರಿಷತ್ತು ಸದಸ್ಯ ಸಿ.ಎಂ.ಇಬ್ರಾಹಿಂ ಅವರು, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ದುರಾದೃಷ್ಟಕರ. ಇದು ಜಾತಿ ಗಲಭೆಯಲ್ಲ. ಘಟನೆ ನಡೆಯದಂತೆ ಪೊಲೀಸರು ತಕ್ಷಣ ಕ್ರಮಕೈಗೊಳ್ಳಲಿಲ್ಲ ಎಂದರು.
ಶಾಸಕ. ಎನ್.ಎ.ಹ್ಯಾರಿಸ್. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಸಯ್ಯದ ನಾಸೀರ್ ಹುಸೇನ್, ಶಾಸಕ ತನ್ವೀರ್ ಸೇಠ್ ಇತರ ಮುಸ್ಲಿಂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


