ರಾಜ್ಯ

ರೈತರ ಮನೆ ಬಾಗಿಲಿಗೆ ಪಶುಸಂಜೀವಿನಿ: ಯೋಜನೆಗೆ ಮುಖ್ಯಮಂತ್ರಿ ಚಾಲನೆ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಜೀವಿನಿ ಲೋಕಾರ್ಪಣೆ ಮಾಡಿದರು. ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಇದನ್ನು ಜಾರಿಗೆ ತರಲಾಗುತ್ತಿದ್ದು ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದ್ದು ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ.

ರೈತರ ಮನೆ ಬಾಗಿಲಿಗೆ ಪಶುಸಂಜೀವಿನಿ: ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಸಿಎಂ ಯಡಿಯೂರಪ್ಪ ಚಾಲನೆ
Published On :

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಜೀವಿನಿ ಲೋಕಾರ್ಪಣೆ ಮಾಡಿದರು. ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಇದನ್ನು ಜಾರಿಗೆ ತರಲಾಗುತ್ತಿದ್ದು ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದ್ದು ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. 


ಈ ಸೇವೆಗಳನ್ನು ಇಲಾಖೆಯ ಹೆಲ್ಪಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 X 7 ಜಾನುವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿದೆ. 2019-20 ನೇ ಸಾಲಿನ ಬಜೆಟ್ ಘೋಷಣೆಯ ರೂ. 2 ಕೋಟಿ ಅನುದಾನ ಮತ್ತು ಇಲಾಖೆಯ ಇತರೆ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. 

ಸಚಿವ ಪ್ರಭು ಚವ್ಹಾಣ್ ಮಾತನಾಡಿ, ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿರುತ್ತದೆ. 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಇದ್ದು, 200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರ ಚಿಕಿತ್ಸಾ ಟೇಬಲ್, ಎ.ಸಿ. ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯಿದೆ ಎಂದು ತಿಳಿಸಿದರು.

ಮನುಷ್ಯರ ಚಿಕಿತ್ಸೆಗೆ ಬೇಕಾದ ವೈದ್ಯಕೀಯ ಸಲಕರಣೆಗಳಂತೆ ಎಲ್ಲ ಸಲಕರಣಗಳು ಪಶು ಆ್ಯಂಬುಲೆನ್ಸ್‌ನಲ್ಲಿ ಇರುತ್ತವೆ. ಸುಸಜ್ಜಿತ ಆಂಬ್ಯುಲೆನ್ಸ್‌ನಲ್ಲಿ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿರುತ್ತದೆ. ಜೊತೆಗೆ 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್. 200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರ ಚಿಕಿತ್ಸಾ ಟೇಬಲ್, ಎಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಇದಲ್ಲದೆ ವಾಶ್ ಬೇಸಿನ್, 100 ವ್ಯಾಟ್ ಎಲ್‌ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ಇದೆ. ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್‌ಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಒದಗಿಸಲಾಗಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.