ಈ ವರ್ಷ ಸರಳ ಮೈಸೂರು ದಸರಾ ಆಚರಣೆ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಮೈಸೂರು ದಸರಾ ಆಚರಣೆ ಸಂಬಂಧ ಚರ್ಚೆ ನಡೆಸುತ್ತಿದ್ದೇನೆ. ಸರಳ ರೀತಿಯಲ್ಲಿ ಹೇಗೆ ಆಚರಿಸಬಹುದು ಎಂಬುದನ್ನು ನೋಡುತ್ತಿರುವುದಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಈ ಬಾರಿ ಕೋವಿಡ್- 19 ಹಿನ್ನೆಲೆಯಲ್ಲಿ ಬೃಹತ್ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಯನ್ನು ರದ್ದುಪಡಿಸಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಮುಖ್ಯಮಂತ್ರಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಪ್ರತಿವರ್ಷ ಹತ್ತು ದಿನಗಳ ಕಾಲ ನಾಡಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17ರಿಂದ 26ರವರೆಗೂ
ದಸರಾ ಆಚರಣೆ ನಡೆಯುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


