ಡಾ, ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಮೈಸೂರು ಜಿ.ಪಂ. ಸಿಇಓ ವರ್ಗಾವಣೆ
ನಂಜನಗೂಡಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.

ಮೈಸೂರು: ನಂಜನಗೂಡಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ. ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ನಂಜನಗೂಡು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ದ ಆಲನಹಳ್ಳಿ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜಿ.ಪಂ. ಸಿಇಓ ಅವರನ್ನು ವರ್ಗಾವಣೆಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ವೈದ್ಯರು ಪ್ರತಿಭಟನೆ ನಡೆಸುವುದನ್ನು ನಿಲ್ಲಿಸಬೇಕು, ಕೊರೋನಾ ಸೋಂಕಿತರ ಸೇವೆಯಲ್ಲಿ ನಿರತರಾಗಬೇಕು ಎಂದು ಮನವಿ ಮಾಡಿದ್ಧಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


