ರಾಜ್ಯ

ಆರೋಗ್ಯಾಧಿಕಾರಿ ಆತ್ಮಹತ್ಯೆ: ಜಿಪಂ ಸಿಇಓ ಅಮಾನತಿಗೆ ಆಗ್ರಹಿಸಿ ವೈದ್ಯರ ಪ್ರತಿಭಟನೆ

ಮೈಸೂರು ಜಿಲ್ಲಾ ಪಂಚಾಯಿತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಕರ್ತವ್ಯದಿಂದ ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವೈದ್ಯರ ಪ್ರತಿಭಟನೆ ಮುಂದುವರಿದಿದೆ.

ಆರೋಗ್ಯಾಧಿಕಾರಿ ಆತ್ಮಹತ್ಯೆ: ಜಿಪಂ ಸಿಇಓ ಅಮಾನತಿಗೆ ಆಗ್ರಹಿಸಿ ವೈದ್ಯರ ಪ್ರತಿಭಟನೆ
ಡಾ.ನಾಗೇಂದ್ರ
Published On :

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಕರ್ತವ್ಯದಿಂದ ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವೈದ್ಯರ ಪ್ರತಿಭಟನೆ ಮುಂದುವರಿದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಮೃತರ ಕುಟುಂಬಕ್ಕೆ 50 ಲಕ್ಷ ರು ಪರಿಹಾರ ನೀಡಿ ತನಿಖೆಗೆ ಆದೇಶಿಸಿದ್ದಾರೆ.  ಆದರೆ ಇದಕ್ಕೆ ವೈದ್ಯರ ಸಂಘ ತೃಪ್ತಿಯಾಗಿಲ್ಲ, ಕೂಡಲೇ ಸಿಇಓ ಮಿಶ್ರಾ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯ ಮತ್ತು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ವೈದ್ಯರು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಜಿಲ್ಲೆಯ ಪ್ರಕರಣದ ವಿವರಗಳನ್ನು ಸಂಗ್ರಹಿಸುವ, ಅಪ್‌ಲೋಡ್ ಮಾಡುವ ಮತ್ತು ನವೀಕರಿಸುವ ಕೋವಿಡ್ ಯುದ್ಧ ಕೊಠಡಿಗಳನ್ನು ಮುಚ್ಚಿ  ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆ ಮುಂದುವರಿಸಿದ್ದಾರೆ. ಶಾಸಕ ಎಸ್ ಎ ರಾಮದಾಸ್ ಮತ್ತು ಸಚಿವ ಎಸ್ ಟಿ ಸೋಮಶೇಖರ್ ಎಲ್ ನಾಗೇಂದ್ರ ಅವರ ಪಾರ್ಥೀವ ಶರೀರದ ದರ್ಶನ ಪಡೆದು ಸಂತಾಪ ಸೂಚಿಸಿದರು.

ಕೆಲಸಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಅವರು ಎದುರಿಸಿದರೆ, ನಾವು ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಹೀಗಾಗಿ ವೈದ್ಯರು ಮರಳಿ ಕೆಲಸಕ್ಕೆ ಹಾಜರಾಗಬೇಕೆಂದು ಸೋಮಶೇಖರ್ ವಿನಂತಿಸಿಕೊಂಡಿದ್ದಾರೆ. ಆದರೆ ಮಿಶ್ರಾ ಅವರನ್ನು ಕೂಡಲೇ ಅಮಾನತುಗೊಳಿಸದಿದ್ದರೇ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ನಾನು ವಿನಂತಿಸುತ್ತೇನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.