ಕೊರೋನಾ ವೈರಸ್: ಕರ್ನಾಟಕದಲ್ಲಿ ಗುಣಮುಖ ಸೋಂಕಿತರ ದಾಖಲೆ, ಒಂದೇ ದಿನ 8061 ಮಂದಿ ಡಿಸ್ಚಾರ್ಜ್
ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಹೌದು.. ಇಂದು ಒಂದೇ ದಿನ ರಾಜ್ಯಾದ್ಯಂತ ಬರೊಬ್ಬರಿ 8061 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇದು ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸೋಂಕಿತರ ಗುಣಮುಖವಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8061 ಮಂದಿ ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಪ್ರಮಾಣ 1,97,625ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದು ಹಾಗೂ ಚೇತರಿಕೆ ಪ್ರಮಾಣ ಹೆಚ್ಚುತ್ತಿರುವುದ ಉತ್ತಮ ಬೆಳವಣಿಗೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ
ಅಂತೆಯೇ ಇಂದು 5851 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಆ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,83,665ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 81,211 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ಸೋಂಕಿನಿಂದ 130 ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಈವರೆಗೂ 4,810 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಇಂದು ಒಂದೇ 1918, ಬೆಳಗಾವಿ 319, ಬಳ್ಳಾರಿ 306, ಮೈಸೂರು 202, ಶಿವಮೊಗ್ಗ 220, ಕೊಪ್ಪಳದಲ್ಲಿ 271 ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


