ಬಿಮ್ಸ್‌ಗೆ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣ ಸಮರ್ಪಿಸಿದ ಮುಖ್ಯಮಂತ್ರಿ ಯಡಿಯೂರಪ್ಪ"
ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.

ಬೆಳಗಾವಿ: ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡಮಾಡಿದ ಈ ಉಪಕರಣಗಳನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯ ಬಳಿಕ ಈ ಉಪಕರಣಗಳನ್ನು ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು.
ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಪಾಟೀಲ ಅವರು ನೀಡಿದ್ದಾರೆ. ಇದೇ ರೀತಿ ಉಳಿದ ಕ್ಷೇತ್ರದ ಶಾಸಕರೂ ಈ ರೀತಿಯ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಲಹೆ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸುತ್ತೋಲೆ ಕೂಡ ಹೊರಡಿಸಲಾಗುತ್ತದೆ ಎಂದರು.
ತಮ್ಮ ಅನುದಾನದಲ್ಲಿ ಬಿಮ್ಸ್ ಗೆ ಆಕ್ಸಿಜನ್ ಉಪಕರಣ ಕೊಡುಗೆ ನೀಡಿದ ಶಾಸಕ ಅಭಯ್ ಪಾಟೀಲ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


