ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೋನಾ ಪಾಸಿಟಿವ್
ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಕೊಳೆದ ನಾಲ್ಕು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಅವರು ಎರಡು ದಿನಗಳ ಹಿಂದೆ ಕೊವಿಡ್-19 ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ.
ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಇತ್ತೀಚಿಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಡಿಕೆ ಶಿವಕುಮಾರ್ ಅವರಿಗೆ ವಕ್ಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


