ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ, ಸೆ.1 ರಿಂದಲೇ ಆನ್ ಲೈನ್ ತರಗತಿ:ಅಶ್ವತ್ಥನಾರಾಯಣ
ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ...

ಬೆಂಗಳೂರು: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಹೇಳಿದ್ದಾರೆ.
ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ ಎಂದರು.
ರಾಜ್ಯ ಸರಕಾರವೂ ಮುಂದಿನ ತಿಂಗಳಿಂದ ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ. ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.
ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


