ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಕೊಲೆ
ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ಸು ನಿಲ್ದಾಣದ ಬಳಿ ಮಧ್ಯರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ಸು ನಿಲ್ದಾಣದ ಬಳಿ ಮಧ್ಯರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
ಮಂಜುನಾಥ್ ಕಬ್ಬಿನ್, ನಿಯಾಜ್ ಕೊಲೆಯಾದವರು. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


