ನಕ್ಷತ್ರ ಆಮೆ ಮಾರಾಟ ಯತ್ನ: ಐವರ ಬಂಧನ, ಓರ್ವ ಪರಾರಿ
ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಜಾಲವೊಂದನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಚಾಮರಾಜನಗರ: ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಜಾಲವೊಂದನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಮಾಗಡಿಯ ರಾಜು, ಕೊಡಗಿನ ಪ್ರವೀಣ್, ವಿಶ್ವನಾಥ್, ಶಿವಮೊಗ್ಗದ ಪ್ರಸನ್ನ ಕುಮಾರ್, ಲಚ್ಚಿ ಕುರಿಯನ್ ಬಂಧಿತ ಆರೋಪಿಗಳು. ಮೂಢ ನಂಬಿಕೆ ಸೃಷ್ಟಿಸಿ ಮನೆಯಲ್ಲಿ ನಕ್ಷತ್ರ ಆಮೆ ಇದ್ದರೆ ಶ್ರೀಮಂತಿಕೆ ಬರಲಿದೆ ಎಂದು ಜನರನ್ನು ನಂಬಿಸಿ ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.
ಈ ಜಾಲದ ಕುರಿತು ಮಾಹಿತಿ ಪಡೆದ ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಐವರನ್ನು ನಕ್ಷತ್ರ ಆಮೆ ಸಮೇತ ಸೆರೆಹಿಡಿದಿದ್ದಾರೆ. ಜೊತೆಗೆ ಪರಾರಿಯಾಗಿರುವ ಶಿವಮೊಗ್ಗದ ಥಾಮಸ್ ಎಂಬಾತನ ಪತ್ತೆಗೆ ಬಲೆ ಬೀಸಿದ್ದು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ವರದಿ ಗುಳಿಪುರ ನಂದೀಶ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


