ರಾಜ್ಯ

ಶಾಲೆಗಳು ಯಾವಾಗ ಮತ್ತು ಹೇಗೆ ಪುನಾರಂಭವಾಗುತ್ತವೆ ಅಂತ ಗೊತ್ತಿಲ್ಲ: ಸಚಿವ ಸುರೇಶ್ ಕುಮಾರ್

ಮಹಾಮಾರಿ ಕೊರೋನಾ ವೈರಸ್ ಎಲ್ಲರ ಮೇಲೆ ಪರಿಣಾಮ ಬೀರಿದೆ. ಆದರೆ ಶಿಕ್ಷಣ ಇಲಾಖೆಯು ಅತಿ ಹೆಚ್ಚು ಹಾನಿಗೊಳಗಾಗಿದೆ. "ಶಾಲೆಗಳನ್ನು ಯಾವಾಗ ತೆರೆಯಬೇಕು ಅಥವಾ ತರಗತಿಗಳು ತೆರೆದ ನಂತರ ಹೇಗೆ ನಡೆಯುತ್ತದೆ...

ಶಾಲೆಗಳು ಯಾವಾಗ ಮತ್ತು ಹೇಗೆ ಪುನಾರಂಭವಾಗುತ್ತವೆ ಅಂತ ಗೊತ್ತಿಲ್ಲ: ಸಚಿವ ಸುರೇಶ್ ಕುಮಾರ್
ಸುರೇಶ್ ಕುಮಾರ್
Published On :

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಎಲ್ಲರ ಮೇಲೆ ಪರಿಣಾಮ ಬೀರಿದೆ. ಆದರೆ ಶಿಕ್ಷಣ ಇಲಾಖೆಯು ಅತಿ ಹೆಚ್ಚು ಹಾನಿಗೊಳಗಾಗಿದೆ. "ಶಾಲೆಗಳನ್ನು ಯಾವಾಗ ತೆರೆಯಬೇಕು ಅಥವಾ ತರಗತಿಗಳು ತೆರೆದ ನಂತರ ಹೇಗೆ ನಡೆಯುತ್ತದೆ ಎಂಬುದು ನಮಗೆ ಇನ್ನೂ ತಿಳಿದಿಲ್ಲ" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಪಿಎಫ್ ಮುಂಗಡ, ರಜೆ ಮತ್ತು ವರ್ಗಾವಣೆಯಂತಹ ಶಿಕ್ಷಕರ ಸಮಸ್ಯೆಗಳನ್ನು ನೀಗಿಸುವ ಶಿಕ್ಷಕ ಮಿತ್ರ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸುರೇಶ್ ಕುಮಾರ್ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಿರುವುದು ನಮ್ಮ ರಾಜ್ಯಕ್ಕೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದ್ದಾರೆ. 8.5 ಲಕ್ಷ ವಿದ್ಯಾರ್ಥಿಗಳು ಸಾಮಾಜಿಕ ದೂರವನ್ನು ಕಾಯ್ದುಕೊಂಡಿದ್ದಾರೆ ಮತ್ತು ಶೇಕಡಾ 98 ರಷ್ಟು ಹಾಜರಾತಿ ಇದೆ ಎಂದು ಸುರೇಶ್ ಕುಮಾರ್ ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಆರಂಭವಾದ ದಿನದಿಂದ ಮುಖ್ಯಮಂತ್ರಿ ನಮ್ಮ ಮೇಲೆ ವಿಶ್ವಾಸ ಮೂಡಿಸಿದರು, ಪಿಯುಸಿ ವಿದ್ಯಾರ್ಥಿಗಳಿಗೂ ಸಹ ಒಂದು ವಿಷಯಕ್ಕೆ ಪರೀಕ್ಷೆಯನ್ನು ನಡೆಸಲಾಯಿತು ಎಂದರು.

"ನೀಟ್ ಮತ್ತು ಜೆಇಇ ಮುಂದೂಡಲು ಒತ್ತಾಯಿಸುತ್ತಿರುವವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಎಷ್ಟು ಸರಾಗವಾಗಿ ನಡೆದವು ಎಂಬುದನ್ನು ನೋಡಬೇಕು" ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.