ರಾಯಣ್ಣ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ: ಹೆಚ್‌ಡಿ ಕುಮಾರಸ್ವಾಮಿ
ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ಬೆಂಗಳೂರು: ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಮರಾಠಿ ಭಾಷಿಗರು ನಡೆಸಿರುವ ದಾಂಧಲೆ ಅಕ್ಷಮ್ಯ ಅಪರಾಧವೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ನಾಡಿನ ಹೆಮ್ಮೆಯಾಗಿರುವ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತಾಗಿದ್ದು, ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ.
ಎಂಇಎಸ್, ಶಿವಸೇನೆ ಅಥವಾ ಇನ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡುವುದು ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


