ಒಂದೂವರೆ ವರ್ಷದ ನಂತರ ಬಳ್ಳಾರಿಗೆ ಬರಲು ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ
ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಕೊನೆಯ ವಿಧಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಸಚಿವ ಮತ್ತುಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಎರಡು ದಿನಗಳ ಕಾಲ ಬಳ್ಳಾರಿಗೆ ಭೇಟಿ ಕೊಡಲು ಸುಪ್ರೀಂ ಕೋರ್ಟ್ ಅನುಮತಿಸಿದೆ. ಈ ಹಿನ್ನೆಲೆ ಶುಕ್ರವಾರ ಮಧ್ಯಾಹ್ನ ರೆಡ್ಡಿ ಬಳ್ಳಾರಿಗೆ ಆಗಮಿಸಲಿದ್ದಾರೆ.

ನವದೆಹಲಿ: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಕೊನೆಯ ವಿಧಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಸಚಿವ ಮತ್ತುಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಎರಡು ದಿನಗಳ ಕಾಲ ಬಳ್ಳಾರಿಗೆ ಭೇಟಿ ಕೊಡಲು ಸುಪ್ರೀಂ ಕೋರ್ಟ್ ಅನುಮತಿಸಿದೆ. ಈ ಹಿನ್ನೆಲೆ ಶುಕ್ರವಾರ ಮಧ್ಯಾಹ್ನ ರೆಡ್ಡಿ ಬಳ್ಳಾರಿಗೆ ಆಗಮಿಸಲಿದ್ದಾರೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರ ಪೀಠ ಎರಡು ದಿನಗಳ ಕಾಲ ಪೊಲೀಸ್ ರಕ್ಷಣೆಯಲ್ಲಿ ಬಳ್ಳಾರಿಗೆ ಭೇಟಿ ನೀಡಲು ಜನಾರ್ಧನ ರೆಡ್ಡಿ ಅವರಿಗೆ ಅನುಮತಿಸಿದೆ. ಆದರೆ ಹಾಗೆ ಭೇಟಿ ನೀಡಿದ ಸಮಯದಲ್ಲಿ ಅವರು ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು ಎಂದು ಹೇಳಿದೆ.
"ಅರ್ಜಿದಾರರ ನಿಕಟವರ್ತಿಯ ತಾಯಿಯ ಸಾವಿನ ಕಡೆಯ ವಿಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ, ಅವರು ಎರಡು ದಿನಗಳ ಕಾಲ ಬಳ್ಳಾರಿಗೆ ಭೇಟಿ ನೀಡಬೇಕಾಗಿದೆ ಎಂದು ಕೋರಿದ್ದಾರೆ. ಈ ಹಿನ್ನೆಲೆ ಅವರಿಗೆ ಎರಡು ದಿನಗಳ ಕಾಲ ಭೇಟಿ ನೀಡಲು ಅನುಮತಿ ನೀಡಲಾಗಿದೆ. ಅದೂ ಸಹ ಪೊಲೀಸರ ಭದ್ರತೆಯ ಅಡಿಯಲ್ಲಿಬರಲಿದೆ. ಅವರು ಬಳ್ಳಾರಿಗೆ ಭೇಟಿ ನೀಡಿದಾಗ ಯಾವುದೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು "
ಕಳೆದ ಬಾರಿ ಮೇ 4 ರಂದು ನಾರ್ಧನ ರೆಡ್ಡಿ ಅವರಿಗೆ ಬಳ್ಳಾರಿಗೆ ಭೇಟಿ ಕೊಡಲು ಮತ್ತು ಅವರ ಸಹೋದರ ಸೋಮಸೇಖರ ರೆಡ್ಡಿ ಅವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣೆಯಲ್ಲಿ ಮತ ಚಲಾಯಿಸಲು ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿರಲಿಲ್ಲ. ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಜನಾರ್ಧನ ರೆಡ್ಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ನ್ಯಾಯಾಲಯದ ಅನುಮತಿಯಿಲ್ಲದೆ ಅವರಿಗೆ ಬಳ್ಳಾರಿಗೆ ಭೇಟಿನೀಡಲು ಸಾಧ್ಯವಾಗುವುದಿಲ್ಲ ಎಂಬುದು ಅವರ ಜಾಮೀನು ಷರತ್ತುಗಳಲ್ಲಿ ಒಂದಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಜನಾರಾಧನ ರೆಡ್ಡಿ ಅವರನ್ನು ಎರಡು ಬಾರಿ ಅಕ್ರಮ ಗಣಿಗಾರಿಕೆ ಆರೋಪದಡಿ ಬಂಧಿಸಲಾಯಿತು - 2011 ರಲ್ಲಿ ಒಮ್ಮೆ ಮತ್ತು ರ 2015 ರಲ್ಲಿ. ಅವರಿಗೆ 2015 ರಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿತು. ಬರೋಬ್ಬರಿ ಒಂದೂವರೆ ವರ್ಷದ ನಂತರ ಬಳ್ಳಾರಿಗೆ ಆಗಮಿಸುತ್ತಿರುವ ಜನಾರ್ಧನ ರೆಡ್ಡಿ ಅವರಿಗಾಗಿ ಬಳ್ಳಾರಿಯಲ್ಲಿ ಅವರ ಅಭಿಮಾನಿಗಳು ಕಾತುರದಿಂಡ ಕಾಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


