ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ - ಗೋವಿಂದ ಕಾರಜೋಳ
ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯವು ಆಯೋಜಿಸಿದ್ದ 5 ದಿನಗಳ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲೂ ಕರ್ನಾಟಕ ಎಂದೆಂದೂ ನಂಬರ್ ಒನ್ ಆಗಿರುವಂತೆ ಶ್ರಮಿಸಬೇಕು ಕರೆ ನೀಡಿದರು.
ಇಂದಿನ ಪೀಳಿಗೆಗೆ ಅನುಗುಣವಾಗಿ,ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿ,ಜಾರಿಗೊಳಿಸುತ್ತಿದೆ.ಶಿಕ್ಷಣ ರಂಗದಲ್ಲೂ ಹೊಸ ಕ್ರಾಂತಿ ಮೂಡಿಸುವ ಹಾಗೂ ಯುವಪೀ ಳಿಗೆ ಅನುಗುಣವಾದ ಶಿಕ್ಷಣವನ್ನು ದೊರಕಿಸಿಕೊಡುವ ಉದ್ದೇಶ ಕೇಂದ್ರ ಸರ್ಕಾರ ದ್ದಾಗಿದೆ. ಕರ್ನಾಟಕ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ರಾಜ್ಯದಲ್ಲಿ ಮೊದಲ ರಾಜ್ಯ ಎನ್ನುವ ಹೆಗ್ಗಳಿಗೆ ಪಾತ್ರವಾಗಲಿದೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಅನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಶಿಕ್ಷಣ ನೀತಿಯನ್ನು ರಾಷ್ಟ್ರೀಯ ಶಿಕ್ಷಣ ನೀತಿಗನುಗುಣವಾಗಿ ರೂಪಿಸಲಾಗುವುದು. ಶಿಕ್ಷಣ ತಜ್ಞರು, ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲು ಸರ್ಕಾರ ಸಿದ್ದವಾಗಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಗೋವಿಂದ ಕಾರಜೋಳ ಹೇಳಿದರು.
ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್. ಆರ್.ಶೆಟ್ಟಿ, ನ್ಯಾಕ್ ನಿರ್ದೇಶಕ ಪ್ರೊ. ಎಸ್.ಸಿ. ಶರ್ಮ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


