ರಾಜ್ಯ

ನೆಲಮಂಗಲ ಬಳಿ ಲಾರಿಗೆ ಕಾರು ಡಿಕ್ಕಿ:  ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರ ದುರ್ಮರಣ

ನಿಯಂತ್ರಣ ತಪ್ಪಿದ ಕಾರು ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯಲ್ಲಿ ಸಂಭವಿಸಿದೆ.

ನೆಲಮಂಗಲ ಬಳಿ ಲಾರಿಗೆ ಕಾರು ಡಿಕ್ಕಿ:  ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರ ದುರ್ಮರಣ
ಲಾರಿಗೆ ಕಾರು ಡಿಕ್ಕಿ
Published On :

ನೆಲಮಂಗಲ: ನಿಯಂತ್ರಣ ತಪ್ಪಿದ ಕಾರು ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಬೆಂಗಳೂರು ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದ ಪುರುಷೋತ್ತಮ್ ,ಚಂದು ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಆದಿತ್ಯ ಎಂಬುವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೇತನ್, ನವೀನ್, ಚಂದು ಮತ್ತು ಆದಿ ಇಟಿಯೋಸ್ ಕಾರಿನಲ್ಲಿ ಕುಣಿಗಲ್ ಕಡೆಗೆ ಹೋಗುತ್ತಿದ್ದರು. ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯ ಬೆಂಗಳೂರು-ಕುಣಿಗಲ್ ಬೈಪಾಸ್ ರಸ್ತೆಯ ಬಿಪಿ ಇಂಡಿಯನ್ ಶಾಲೆ ಮುಂಭಾಗ ಇವರ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಡಿವೈಡರ್ ಹಾರಿ ಪಕ್ಕದ ರಸ್ತೆಗೆ ನುಗ್ಗಿ ಈ ಮಾರ್ಗದಲ್ಲಿ ಬರುತ್ತಿದ್ದ ಗ್ಯಾಸ್ ಲಾರಿಗೆ ಕಾರು ಅಪ್ಪಳಿಸಿದ್ದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ನೆಲಮಂಗಲ ಸಂಚಾರಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಿನಿಂದ ಮೃತದೇಹಗಳನ್ನು ಹೊರತೆಗೆಯಲು ಸುಮಾರು 2 ತಾಸು ಸಮಯ ಬೇಕಾಯಿತು. ಇನ್ನೂ ಘಟನೆ ಬಗ್ಗೆ ವಿವರಿಸಿರುವ ಲಾರಿ ಚಾಲಕ ವೇಣುಗೋಪಾಲ್, ಎದುರುಗಡೆಯಿಂದ ವೇಗವಾಗಿ ಬರುತ್ತಿದ್ದ ಕಾರನ್ನು ನೋಡಿ ನಾನು ಬ್ರೇಕ್ ಹಾಕಿದೆ, ಆದಾಗ್ಯು ಕಾರು ನನ್ನ ಲಾರಿಯ ಮುಂದಿನ ಚಕ್ರಕ್ಕೆ ಬಂದು ಅಪ್ಪಳಿಸಿತು, ಇದರಿಂದ ನನಗೆ ಆಘಾತವಾಯಿತು ಎಂದು ಹೇಳಿದ್ದಾರೆ. ಲಾರಿ ಬೆಂಗಳೂರಿನಿಂದ ಯಡಿಯೂರು ಕಡೆಗೆ ಹೋಗುತ್ತಿತ್ತು, ಮೃತರಿದ್ದ ಕಾರು ಕುಣಿಗಲ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದರು.

ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಸಂಚಾರಿ ಠಾಣೆ ಸಿಪಿಐ ವೀರೇಂದ್ರ ಪ್ರಸಾದ್ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿ ಕಾರಿನಲ್ಲಿ ಸಿಕ್ಕಿಕೊಂಡಿದ್ದ ಗಾಯಾಳುವನ್ನು ತಕ್ಷಣ ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.