ವಾಹನಗಳ ಸಿಂಧುತ್ವ ಅವಧಿ, ತೆರಿಗೆ ಪಾವತಿಗೆ ಅವಧಿ ವಿಸ್ತರಣೆ: ಸಾರಿಗೆ ಇಲಾಖೆ ಆದೇಶ
ರಾಜ್ಯ ಸರ್ಕಾರ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ವಾಹನಗಳ ಸಿಂಧುತ್ವ ಅವಧಿ, ತೆರಿಗೆ ಪಾವತಿಗೆ ಅವಧಿ ಡಿಸೆಂಬರ್ 31 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ವಾಹನಗಳ ಸಿಂಧುತ್ವ ಅವಧಿ, ತೆರಿಗೆ ಪಾವತಿಗೆ ಅವಧಿ ಡಿಸೆಂಬರ್ 31 ರವರೆಗೆ ವಿಸ್ತರಿಸಿ ಆದೇಶಿಸಿದೆ.
ಮೋಟಾರು ವಾಹನಗಳ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989 ರಡಿಯಲ್ಲಿ ವಿತರಿಸಿರುವ ಎಲ್ಲಾ ತರಹದ ದಾಖಲಾತಿಗಳ ದಿನಾಂಕ ಫೆಬ್ರವರಿ 1 ರಿಂದ ಪೂರ್ವಾನ್ವಯವಾಗುವಂತೆ ಸಿಂಧುತ್ವ(validity) ಮುಕ್ತಾಯಗೊಂಡಿರುವಂತಹ ದಾಖಲಾತಿಗಳಿಗೆ ಸೀಮಿತಗೊಳಿಸಿ ಸಿಂಧುತ್ವ ಅವಧಿಯನ್ನು ದಿನಾಂಕ ಡಿಸೆಂಬರ್ 31 ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿದೆ.
ಈ ಸಂಬಂದ ಆದೇಶ ಹೊರಿಡಿಸಿರುವ ಸರ್ಕಾರ ಅವಧಿ ಮುಗಿದಿರುವ ಹಿನ್ನಲೆಯಲ್ಲಿ ಮತ್ತೆ ಸಿಂಧುತ್ವ ಪಡೆದುಕೊಳ್ಳಲು ಸಮಸ್ಯೆ ತಪ್ಪಿಸಲು ಉಪ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ 2020 ಫೆಬ್ರವರಿ 1ರ ವೇಳೆಗೆ ಸಿಂಧುತ್ವ ಅವಧಿ ಮುಕ್ತಾಯಗೊಂಡಿದ್ದರು ಮಾನ್ಯವಾಗಿರುತ್ತದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


