ರಾಜ್ಯ

ಕಲಬುರಗಿ: ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡೇಟು

ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿ ಬಳಿ ನಡೆದಿದೆ.ಆರೋಪಿ ಫಯೂಮ್ ಅಲಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಕಲಬುರಗಿ: ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡೇಟು
ಫಯೂಮ್ ಅಲಿ
Published On :

ಕಲಬುರಗಿ: ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿ ಬಳಿ ನಡೆದಿದೆ.
ಆರೋಪಿ ಫಯೂಮ್ ಅಲಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲು ತೆರಳಿದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ತಮ್ಮ ಆತ್ಮರಕ್ಷಣೆಗಾಗಿ ಸ್ಟೇಷನ್ ಬಜಾರ್ ಠಾಣೆ ಸಿಪಿಐ ಲಾಲ್‌ಸಾಬ್ ಗವಂಡಿ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಕಲಬುರಗಿಯ ಅಂಡರ್‌ ಬ್ರಿಡ್ಜ್ ಬಳಿ ಸಾಗರ್ ಎಂಬ ಯುವಕನ ಮೇಲೆ ಆರೋಪಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲು ಮುಂದಾದ ಪೋಲೀಸರ ಮೇಲೆ ಫಯೂಮ್ ಹಲ್ಲೆ ಮಡಿದ್ದಾನೆ. ಬಳಿಕ ಸ್ಥಳದಿಂದ ತಪ್ಪಿಸಿಕೊಳ್ಳಲು ಮುಂದಾದಾಗ ಪೋಲೀಸರು ಆತ್ನ ಕಾಲಿಗೆ ಗುಂಡು ಹಾರಿಸಿದ್ದಾರೆ. 

ಆರೋಪಿಯನ್ನೀಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಇಬ್ಬರು ಪೇದೆಗಳಿಗೆ ಸಹ ಗಾಯವಾಗಿದ್ದು ಅವರನ್ನೂ ಸಹ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.