ರಾಜ್ಯ

ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಾಂತಿ, ಧಾರ್ಮಿಕ ಸಾಮರಸ್ಯದ ರೂವಾರಿ: ಸಿಎಂ ಯಡಿಯೂರಪ್ಪ

ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಾಂತಿ, ಧಾರ್ಮಿಕ ಸಾಮರಸ್ಯದ ರೂವಾರಿಗಳಾಗಿದ್ದು, ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಣ್ಣಿಸಿದ್ದಾರೆ.

ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಾಂತಿ, ಧಾರ್ಮಿಕ ಸಾಮರಸ್ಯದ ರೂವಾರಿ: ಸಿಎಂ ಯಡಿಯೂರಪ್ಪ
'ಸುತ್ತೂರು ಶ್ರೀ ಮಠ - ಗುರು ಪರಂಪರೆ' ಪುಸ್ತಕ ಬಿಡುಗಡೆ
Published On :

ಬೆಂಗಳೂರು: ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶಾಂತಿ, ಧಾರ್ಮಿಕ ಸಾಮರಸ್ಯದ ರೂವಾರಿಗಳಾಗಿದ್ದು, ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಣ್ಣಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಇಂದು ಸುತ್ತೂರು ಜಗದ್ಗುರು ವೀರಸಿಂಹಾಸನ ಮಠದ ವತಿಯಿಂದ ಆಯೋಜಿಸಲಾಗಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105ನೇ ಜಯಂತಿ ಮಹೋತ್ಸವದ ಡಿಜಿಟಲ್ ಕಾರ್ಯಕ್ರಮದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ 'ಸುತ್ತೂರು ಶ್ರೀ ಮಠ - ಗುರು ಪರಂಪರೆ' ಪುಸ್ತಕವನ್ನು ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೆಯ ಜಯಂತಿ ಉತ್ಸವದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ. ಮಹಾನ್ ಸಂತರು, ಮಹರ್ಷಿಗಳು, ತತ್ವಜ್ಞಾನಿಗಳು, ಶರಣರು ದಾಸವೇರಣ್ಯರು ತಮ್ಮ ಬದುಕನ್ನು ಮಾನವನ ಉದ್ಧಾರಕ್ಕಾಗಿ ಮುಡಿಪಾಗಿಸಿ ಮಹಾಬೆಳಕಾದರು. ಇಂತಹ ಮಹಾನ್ ಸಂತರಲ್ಲಿ ಒಬ್ಬರಾದ ನಮ್ಮ 
ಪರಮಪೂಜ್ಯ ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದರು.

ಕೊರೋನಾದ ಹಾವಳಿಯಿಂದ ಈ ಬಾರಿ ರಾಜೇಂದ್ರ ಶ್ರೀಗಳ ಜಯಂತಿ ಮಹೋತ್ಸವದಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡು ಪರಮಪೂಜ್ಯರ ಕೃಪಾಶೀರ್ವಾದಕ್ಕೆ ಪಾತ್ರರಾಗಲು ಇದೊಂದು ಒಳ್ಳೆಯ ವೇದಿಕೆಯಾಗಿದೆ. ಅನ್ನ, ಅರಿವು, ಆರೋಗ್ಯ, ಸಮಾಜ ಸುಧಾರಣೆ, ಧರ್ಮಜಾಗೃತಿ, ಆಧ್ಯಾತ್ಮ ಕ್ಷೇತ್ರದಲ್ಲಿ ಜಗದ್ಗುರುಗಳು ಭದ್ರ ಬುನಾದಿ ಹಾಕಿದ್ದಾರೆ. ಜೆ.ಎಸ್.ಎಸ್ 
ಮಹಾವಿದ್ಯಾಪೀಠವನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ವಸತಿ ಸಹಿತ ಶಿಕ್ಷಣ ನೀಡುವ ಮಹತ್ಕಾರ್ಯವನ್ನು ಮಠದ ವತಿಯಿಂದ ಮಾಡಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.