ಬಡ್ತಿ ಹೊಂದಿದ ಸಹ ಶಿಕ್ಷಕರು,ಪದವಿ ಪೂರ್ವ ಉಪನ್ಯಾಸಕರಿಗೆ 6ನೇ ವೇತನ ಶಿಫಾರಸು ಅನುಷ್ಠಾನಗೊಳಿಸಲು ಎಚ್ ಡಿಡಿ ಒತ್ತಾಯ
ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು: ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಸೇವಾ ಜೇಷ್ಠತೆ ಮತ್ತು ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿ ಪೂರ್ವ ಉಪನ್ಯಾಸಕರು ತಮ್ಮ ಜೊತೆಯಲ್ಲಿಯೇ ಸಮಾನ ವೃಂದದ ಸೇವೆಗೆ ಸೇರಿದ ಬಡ್ತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ಮೂಲ ವೇತನವನ್ನು ಹೊಂದಿರುವುದು ಸರಿಯಾದ ಕ್ರಮವಲ್ಲ.ಆರ್ಥಿಕ ಅನ್ಯಾಯಕ್ಕೆ ಒಳಗಾಗಿರುವ ಬಡ್ತಿ ಸಹ ಶಿಕ್ಷಕರು ಮತ್ತು ಉಪನ್ಯಾಸಕರ ವೇತನದಲ್ಲಿನ ತಾರತಮ್ಯವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ವರದಿಯಲ್ಲಿ ಸ್ಪಷ್ಟವಾಗಿ ಶಿಫಾರಸ್ಸು ಮಾಡಲಾಗಿದೆ.
ಈ ಶಿಫಾರಸ್ಸನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವ ಮೂಲಕ ಬಡ್ತಿ ಉಪನ್ಯಾಸಕರು ಮತ್ತು ಸಹ ಶಿಕ್ಷಕರ ಜ್ವಲಂತ ಸಮಸ್ಯೆಯನ್ನು ನಿವಾರಿಸಲು ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಮಾಜಿ ಪ್ರಧಾನಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


