ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಸೋಂಕು!
ರಾಜ್ಯದಲ್ಲಿ ಹಲವು ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲುತ್ತಿದ್ದು, ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲುತ್ತಿದ್ದು, ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ನಳಿನ್ ಕುಮಾರ್ ಟ್ವೀಟ್ ಮಾಡಿದ್ದು, ವೈದ್ಯರ ಸಲಹೆ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ, ಆದರೆ ರೋಗ ಲಕ್ಷಣಗಳಿಲ್ಲ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
:ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊರೋನಾ ಸೋಂಕು ತಗುಲಿತ್ತು. ಇದಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


