ರಾಜ್ಯ

ಇಂದ್ರಜಿತ್‌ ಲಂಕೇಶ್ ಡ್ರಗ್ಸ್‌ ಮಾಫಿಯಾ ಬಗ್ಗೆ ಮಾಹಿತಿ ನೀಡಲಿ, ಅವರ ರಕ್ಷಣೆಯ ಹೊಣೆ ನಮ್ಮದು; ಸಿ.ಟಿ. ರವಿ

ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಚಾರ ಬಹಿರಂಗವಾಗಿದ್ದು, ಈ ವಿಷಯವಾಗಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ

ಇಂದ್ರಜಿತ್‌ ಲಂಕೇಶ್ ಡ್ರಗ್ಸ್‌ ಮಾಫಿಯಾ ಬಗ್ಗೆ ಮಾಹಿತಿ ನೀಡಲಿ, ಅವರ ರಕ್ಷಣೆಯ ಹೊಣೆ ನಮ್ಮದು; ಸಿ.ಟಿ. ರವಿ
ಇಂದ್ರಜಿತ್ ಲಂಕೇಶ್
Published On :

ಚಿಕ್ಕಮಗಳೂರು: ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಚಾರ ಬಹಿರಂಗವಾಗಿದ್ದು, ಈ ವಿಷಯವಾಗಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.

ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಈ ಡ್ರಗ್‌ ಮಾಫಿಯಾ ಬಗ್ಗೆ ತಮಗೆ ಗೊತ್ತಿರುವ ಮಾಹಿತಿ ನೀಡಲಿ, ಅವರ ರಕ್ಷಣೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದು ಅವರು ತಿಳಿಸಿದ್ದಾರೆ.

ಈ ತನಿಖೆಗೆ ಇಂದ್ರಜಿತ್ ಲಂಕೇಶ್‌ ಅವರ ಸಹಕಾರ ನಮಗೆ ಅಗತ್ಯವಿದೆ. ಅವರಿಗೆ ಯಾರ ಬಗ್ಗೆಯೂ ಭಯ ಬೇಡ. ಅವರಿಗೆ ಪೊಲೀಸ್‌ ಇಲಾಖೆ ರಕ್ಷಣೆಯ ವ್ಯವಸ್ಥೆಯನ್ನು ಮಾಡುತ್ತದೆ. ಹೀಗಾಗಿ ಅವರು ತನಿಖೆಗೆ ಸಹಕರಿಸಬೇಕು. ಈ ಜಾಲವನ್ನ ಬಗ್ಗು ಬಡಿಯಲು, ಮತ್ತಷ್ಟು ಜನ ಬಲಿಯಾಗದಿರಲು ಅವರ ಸಹಕಾರದ ಬೇಕು" ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಎನ್​ಸಿಬಿ ಅಧಿಕಾರಿಗಳು ಗುರುವಾರ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಬಗ್ಗೆ ವಿಚಾರಣ ವೇಳೆ ಅನೇಕ ಅಚ್ಚರಿಯ ಮಾಹಿತಿಗಳು ಹೊರಬೀಳುತ್ತಿವೆ. ಇವರು ನಟ, ನಟಿಯರು, ಸಂಗೀತ ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರಿಗೂ ಡ್ರಗ್ ಪೂರೈಸುತ್ತಿದ್ದ ವಿಷಯ ಇದೀಗ ಬೆಳಕಿಗೆ ಬಂದಿದೆ. ಮರದ, ರಟ್ಟಿನ ಬಾಕ್ಸ್​ಗಳಲ್ಲಿ ಮಕ್ಕಳ ಆಟಿಕೆ ವಸ್ತುಗಳಲ್ಲಿ ಡ್ರಗ್ಸ್ ಪಾರ್ಸೆಲ್ ಮಾಡುತ್ತಿದ್ದರು ಎಂಬ ಸಂಗತಿ ವಿಚಾರಣೆಯಲ್ಲಿ ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.