ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ಹತೋಟಿಗೆ ಕ್ರಮ- ಸಚಿವ ಪ್ರಭು ಚವ್ಹಾಣ್
ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಬೀದರ್: ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಪಶುವೈದ್ಯಾಧಿಕಾರಿಗಳು ರೋಗ ನಿಯಂತ್ರಣಕ್ಕೆ ಮುಂದಾಗಬೇಕು, ಇಲ್ಲವೇ ಪರಿಣಾಮ ಎದುರಿಸಲು ಸಿದ್ಧರಾಗಿ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಒಂದೆಡೆ ಸಂಕಷ್ಟ, ಮತ್ತೊಂದೆಡೆ ನೆರೆಯಿಂದ ಆದಾಯವಿಲ್ಲದೆ ರೈತರು ಕಂಗೆಟ್ಟಿದ್ದಾರೆ. ಇಂತಹ ವೇಳೆಯಲ್ಲಿ ಪಶುಸಂಗೋಪನೆ ಒಂದೇ ರೈತರಿಗೆ ಜೀವನಾಧಾರವಾಗಿದೆ. ಈಗ ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ‘ಲಂಪಿಸ್ಕಿನ್’ ಜಾನುವಾರುಗಳಿಗೆ ಈ ವಿಚಿತ್ರ ಕಾಯಿಲೆ ಕಂಡುಬಂದಿದ್ದು, ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದರಿಂದ ಪಶುಪಾಲಕರು ಆಂತಂಕಕ್ಕಿಡಾಗಿರುವುದು ತಮ್ಮ ಗಮನಕ್ಕೂ ಬಂದಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗಳಿಗೆ ರೋಗ ಹೆಚ್ಚು ಕಂಡುಬರುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಅಲ್ಲದೇ, ಹೆಚ್ಚು ಪ್ರಕರಣಗಳಿರುವ ಗ್ರಾಮಗಳಲ್ಲಿ ಪಶು ಆರೋಗ್ಯ ಶಿಬಿರ ನಡೆಸಿ ರೋಗವನ್ನು ಹತೋಟಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


