ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾ ಹಣ ಬಳಕೆ: ಎಚ್ಡಿ ಕುಮಾರಸ್ವಾಮಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾದ ಹಣ ಬಳಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸ್ಫೋಟಿಸಿದ್ದಾರೆ.

ತುಮಕೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಮಾಫಿಯಾದ ಹಣ ಬಳಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸ್ಫೋಟಿಸಿದ್ದಾರೆ.
ಇಲ್ಲಿ ಸುದ್ದಿಗಾರರಿಗೆ ಬೆಂಗಳೂರು ಡ್ರಗ್ ಮಾಫಿಯಾ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಕ್ರಿಕೆಟ್ ಬೆಟ್ಟಿಂಗ್ ಹಾಗೂ ಡ್ರಗ್ ನಿಂದ ಬಂದಂತಹ ಹಣ ಬಳಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಪ್ರತಿಭಟನೆಗೆಂದು ಕುಮಾರಸ್ವಾಮಿ ಅವರು ತುರುವೇಕೆರೆಗೆ ಬಂದಿದ್ದರು. ಆದರೆ ಸೆಕ್ಷನ್ 144 ಇದಿದ್ದರಿಂದ ಪ್ರತಿಭಟನೆ ಕೈಬಿಟ್ಟರು. ನಂತರ ಮಾತನಾಡಿದ ಅವರು ನನ್ನ ಅವಧಿಯಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಕಠಿಣ ಕ್ರಮ ಕೈಗೊಂಡಿದ್ದೆ ಎಂದು ಹೇಳಿದ್ದಾರೆ.
ನಾನು ಕಠಿಣ ಕ್ರಮಕೈಗೊಂಡಿದ್ದರ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚಿನ ಚರ್ಚೆ ಆಗಬಾರದು. ಇದರಿಂದ ಎಳೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ. ನಾನು ಚಿತ್ರ ನಿರ್ಮಾಪಕನಾಗಿದ್ದ ಕಾಲದಲ್ಲಿ ಡ್ರಗ್ ಮಾಫಿಯಾ ಇರೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


