ರಾಜ್ಯ

ಅನ್ ಲಾಕ್ 4: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ, ಸೆ.7ರಿಂದ ಮೆಟ್ರೋ ಸಂಚಾರ ಪುನಾರಂಭ

ಕೇಂದ್ರ ಗೃಹ ಸಚಿವಾಲಯ ಅನ್‌ಲಾಕ್ 4ರ ಮಾರ್ಗಸೂಚಿ ಪ್ರಕಟಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ಸೋಮವಾರ ಅನ್‌ಲಾಕ್‌-4 ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅನ್ ಲಾಕ್ 4: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ, ಸೆ.7ರಿಂದ ಮೆಟ್ರೋ ಸಂಚಾರ ಪುನಾರಂಭ
ನಮ್ಮ ಮೆಟ್ರೋ
Published On :

ಬೆಂಗಳೂರು: ಕೇಂದ್ರ ಗೃಹ ಸಚಿವಾಲಯ ಅನ್‌ಲಾಕ್ 4ರ ಮಾರ್ಗಸೂಚಿ ಪ್ರಕಟಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ಸೋಮವಾರ ಅನ್‌ಲಾಕ್‌-4 ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ  ಟಿ.ಎಂ.ವಿಜಯಭಾಸ್ಕರ್ ಸೋಮವಾರ ಅಧಿಕೃತ ಆದೇಶ ಹೊರಡಿಸಿದ್ದು, ಸೆಪ್ಟಂಬರ್ 7ರಿಂದ ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಶಾಲಾ-ಕಾಲೇಜು ಸೆ.30ರವರೆಗೆ ತೆರೆಯುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.

ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿದ ಇತರೆ ಪ್ರದೇಶಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಶಾಲೆ, ಕಾಲೇಜುಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸೆಪ್ಟಂಬರ್ 30ರವರೆಗೆ ತೆರೆಯುವಂತಿಲ್ಲ. ಆದರೆ ಆನ್‌ಲೈನ್, ದೂರಶಿಕ್ಷಣ ಕಲಿಕೆಗಳಿಗೆ ಅನುಮತಿ ಮುಂದುವರಿಯಲಿದೆ. 
ಆನ್‌ಲೈನ್ ಬೋಧನೆ ಮತ್ತು ಟೆಲಿ ಸಮಾಲೋಚನೆ ಮತ್ತು ಈ ಸಂಬಂಧಿತ ಕಾರ್ಯಕ್ಕಾಗಿ ಒಮ್ಮೆಲೆ ಶಾಲೆಗಳಿಗೆ ಶೇಕಡಾ 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕರೆಯಲು ಅನುಮತಿಸಬಹುದು.

9ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯುವುದಕ್ಕಾಗಿ ಕಂಟೈನ್‌ಮೆಂಟ್‌  ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ ಸ್ವ ಇಚ್ಛೆಯ ಆಧಾರದ ಮೇಲೆ ತಮ್ಮ ಶಾಲೆಗಳಿಗೆ ಭೇಟಿ ನೀಡಲು ಅನುಮತಿಸಬಹುದು. ಆದರೆ ಇದು ಅವರ ತಂದೆ ತಾಯಿಗಳ ಮತ್ತು ಪೋಷಕರ ಲಿಖಿತ ಅನುಮತಿಗೆ ಒಳಪಟ್ಟಿರುತ್ತದೆ. ಇದು ಸೆ.21ರಿಂದ ಜಾರಿಗೆ ಬರುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹಾಗೆಯೇ ಥಿಯೇಟರ್, ಸ್ವಿಮ್ಮಿಂಗ್ ಪೂಲ್ ಗೆ ಅನುಮತಿ ನೀಡಿಲ್ಲ. ಮಲ್ಟಿಫ್ಲೆಕ್ಸ್, ಮನರಂಜನಾ ಪಾರ್ಕ್ ಗಳು ಕೂಡ ಬಂದ್ ಆಗಿರಲಿವೆ. ಸೆಪ್ಟೆಂಬರ್ 30ರವರೆಗೆ ಯಾವುದು ತೆರೆಯದಂತೆ ಮಾರ್ಗಸೂಚಿಯಲ್ಲಿ ನಿರ್ಬಂಧ  ಹೇರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.