ರಾಜ್ಯ

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರಗೆ ಕೊರೋನಾ ದೃಢ 

ರಾಜ್ಯದಲ್ಲಿ ದಿನ ದಿನಕ್ಕೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು ಶಾಸಕರು, ಸಂಸದರು ಸೇರಿ ಯಾರೂ ಈ ಸೋಂಕಿನಿಂದ ಹೊರಗುಳಿದಿಲ್ಲ. ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ ಅವರಿಗೂ ಸೋಂಕು ದೃಢಪಟ್ಟಿದೆ.

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರಗೆ ಕೊರೋನಾ ದೃಢ 
ಅರಗ ಜ್ಞಾನೇಂದ್ರ
Published On :

ತೀರ್ಥಹಳ್ಳಿ: ರಾಜ್ಯದಲ್ಲಿ ದಿನ ದಿನಕ್ಕೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು ಶಾಸಕರು, ಸಂಸದರು ಸೇರಿ ಯಾರೂ ಈ ಸೋಂಕಿನಿಂದ ಹೊರಗುಳಿದಿಲ್ಲ. ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ  ಅವರಿಗೂ ಸೋಂಕು ದೃಢಪಟ್ಟಿದೆ. 

ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿರುವ ಶಾಸಕ ಅರಗ ಜ್ಞಾನೇಂದ್ರ "ನನಗೆ ಯಾವ ರೋಗ ಲಕ್ಷಣವಿಲ್ಲದಿದ್ದರೂ ಕೋವಿಡ್ ದೃಢಪಟ್ಟಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಶೀಘ್ರ ಗುಣಮುಖನಾಗಿ ನಿಮ್ಮ ಸೇವೆಗೆ ಮರಳುತ್ತೇನೆ" ಎಂದಿದ್ದಾರೆ.

"ಆತ್ಮೀಯರೇ, ನಾನು ಇಂದು #COVID19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲವಾದರೂ, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೊಳಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ.

"ನಿಮ್ಮ ಶುಭಾಶೀರ್ವಾದಗಳೊಂದಿಗೆ ಶೀಘ್ರದಲ್ಲೇ ನಿಮ್ಮ ಸೇವೆಗೆ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಂತಹ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತಿದ್ದೇನೆ.." ಶಾಸಕರು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.