ಜನವರಿ, ಫೆಬ್ರವರಿಯಲ್ಲಿ ಕೋವಿಡ್ ಎರಡನೇ ಅಲೆಯ ಸಾಧ್ಯತೆ: ಟಿಎಸಿ ವರದಿ
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿದೆ ಎಂದು ನಿಟ್ಟಿಸಿರು ಬಿಡುತ್ತಿರುವಾಗಲೇ ಕೋವಿಡ್- 19 ತಾಂತ್ರಿಕ ಸಮಿತಿ, 2021ರ ಜನವರಿ- ಫೆಬ್ರವರಿಯಲ್ಲಿ ರಾಜ್ಯ ಎರಡನೇ ಸೋಂಕಿನ ಅಲೆ ಎದುರಿಸಲಿದೆ ಎಂಬ ವರದಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿದೆ ಎಂದು ನಿಟ್ಟಿಸಿರು ಬಿಡುತ್ತಿರುವಾಗಲೇ ಕೋವಿಡ್- 19 ತಾಂತ್ರಿಕ ಸಮಿತಿ, 2021ರ ಜನವರಿ- ಫೆಬ್ರವರಿಯಲ್ಲಿ ರಾಜ್ಯ ಎರಡನೇ ಸೋಂಕಿನ ಅಲೆ ಎದುರಿಸಲಿದೆ ಎಂಬ ವರದಿ ನೀಡಿದೆ.
ಈ ಕುರಿತು ಸರ್ಕಾರಕ್ಕೆ ಏಳು ಪುಟಗಳ ವರದಿ ಸಲ್ಲಿಸಿರುವ ಸಮಿತಿ, ಎರಡನೇ ಅಲೆಯನ್ನು ಗುರುತಿಸಲು ಮತ್ತು ನಿಯಂತ್ರಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ.
ಟಿಎಸಿ ಸದಸ್ಯ ಮತ್ತು ಕೋವಿಡ್-19 ರಾಜ್ಯ ನೋಡಲ್ ಅಧಿಕಾರಿ ಡಾ. ಸಿ. ಎನ್. ಮಂಜುನಾಥ್, ಅಮೆರಿಕ, ಯುರೋಪ್ ಆಸ್ಟ್ರೇಲಿಯಾದಲ್ಲಿ ಎರಡನೇ ಅಲೆ ಕಾಣಿಸಿಕೊಂಡಿದ್ದು, ದೆಹಲಿಯಲ್ಲಿ ಕೂಡಾ ಅದೇ ಪುನರಾವರ್ತನೆಯಾಗಿದೆ.
ಈ ಪ್ರವೃತ್ತಿಯನ್ನು ಗಮನಿಸಿದರೆ ಜನವರಿ ಮತ್ತು ಫೆಬ್ರವರಿಯಲ್ಲಿ ರಾಜ್ಯದಲ್ಲಿ ಕೂಡಾ ಎರಡನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


