ಬಿಜೆಪಿ ಶಾಸಕ ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ - ಪುರಸಭೆ ಸದಸ್ಯೆ ಆರೋಪ
ಬಿಜೆಪಿ ಶಾಸಕ ತಮ್ಮನ್ನು ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ ಮಾಡಿಸಿಕೊಂಡಿರುವುದಾಗಿ ಪುರಸಭೆ ಸದಸ್ಯೆಯೊಬ್ಬರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ.

ಬೆಂಗಳೂರು: ಬಿಜೆಪಿ ಶಾಸಕ ತಮ್ಮನ್ನು ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ ಮಾಡಿಸಿಕೊಂಡಿರುವುದಾಗಿ ಪುರಸಭೆ ಸದಸ್ಯೆಯೊಬ್ಬರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ.
ನವೆಂಬರ್ 9ರಂದು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಚಾಂದಿನಿ ನಾಯಕ್ ಪುರಸಭೆ ಕಟ್ಟಡಕ್ಕೆ ತೆರಳುತ್ತಿರುವಾಗ ಮುಖ್ಯಗೇಟ್ ನಲ್ಲಿ ಅವರನ್ನು ತಡೆದ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಎಳೆದಾಡಿದ್ದ ಆರೋಪ ಕೇಳಿಬಂದಿತ್ತು. ಪುರಸಭೆ ಕಟ್ಟಡದ ಪ್ರವೇಶದ್ವಾರದಲ್ಲಿಯೇ ತಮ್ಮನ್ನು ಎಳೆದಾಡಿ ನೂಕಲಾಗಿತ್ತು ಎಂದು ಚಾಂದಿನಿ ನಾಯಕ್ ಹೇಳಿದ್ದಾರೆ.
ಮಹಿಳೆಯೊಂದಿಗೆ ಶಾಸಕರು ನಡೆದುಕೊಂಡ ರೀತಿ ಸರಿಯಿರಲಿಲ್ಲ ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಬಿ. ಟಿ ರಕ್ಷಿತಾ ಆರೋಪಿಸಿದ್ದಾರೆ. ಆದಾಗ್ಯೂ, ಈ ಆರೋಪವನ್ನು ತಳ್ಳಿ ಹಾಕಿರುವ ಸಿದ್ದು ಸವದಿ, ಚಾಂದಿನಿ ನಾಯಕ್ ಆರು ವರ್ಷಗಳ ಹಿಂದೆಯೇ ಟ್ಯೂಬೆಕ್ಟಮಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯಾವುದೇ ಗರ್ಭಪಾತ ಪ್ರಕರಣಗಳು ಆಗದಿರುವ ಬಗ್ಗೆ ಜಿಲ್ಲಾ ಆಸ್ಪತ್ರೆ ವೈದ್ಯರು ತಮ್ಮಗೆ ಹೇಳಿರುವುದಾಗಿ ಸಿದ್ದು ಸವದಿ ತಿಳಿಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ನೀಡಲು ನಿರಾಕರಿಸಿದ ನಂತರ ಕಾಂಗ್ರೆಸ್ ಬೆಂಬಲದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದ ಬಿಜೆಪಿಯ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ ಮತ್ತು ಗೋದಾವರಿ ಅವರನ್ನು ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಎಳೆದಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


