ರಾಜ್ಯ

ಐಎಂಎ ಹಗರಣ: ಸಿಬಿಐನಿಂದ ಮಾಜಿ ಸಚಿವ ರೋಷನ್ ಬೇಗ್ ವಿಚಾರಣೆ ಇಂದು

ಬಹುಕೋಟಿ ಐಎಂಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬುಧವಾರ ವಿಚಾರಣೆಗೊಳಪಡಿಸಲಿದ್ದಾರೆ.

ಐಎಂಎ ಹಗರಣ: ಸಿಬಿಐನಿಂದ ಮಾಜಿ ಸಚಿವ ರೋಷನ್ ಬೇಗ್ ವಿಚಾರಣೆ ಇಂದು
ರೋಷನ್ ಬೇಗ್
Published On :

ಬೆಂಗಳೂರು: ಬಹುಕೋಟಿ ಐಎಂಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬುಧವಾರ ವಿಚಾರಣೆಗೊಳಪಡಿಸಲಿದ್ದಾರೆ. 

ಇಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೂ ಸಿಬಿಐ ಅಧಿಕಾರಿಗಳು ಹಗರಣ ಪ್ರಕರಣ ಸಂಬಂಧ ವಿಚಾರಣೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ರೋಷನ್ ಬೇಗ್ ಅವರು ಸೋಮವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಮರಳಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಸಿಬಿಐ ಅಧಿಕಾರಿಗಳು ಅವರನ್ನು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಬೇಗ್'ರನ್ನು ಡಿ.2ರಂದು ಸಂಜೆ 5 ಗಂಟೆವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ. ಜೊತೆಗೆ ಬೇಗ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.4ಕ್ಕೆ ಮುಂದೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.