ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ
ರಾಜ್ಯದಲ್ಲಿ ಯಾವುದೇ ಚುನಾವಣೆ ಇದ್ದರೂ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಕಾಂಗ್ರೆಸ್ ಪಕ್ಷದ ಸೋಲು ಎಂಬುದು ತೀರ್ಮಾನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ತುಮಕೂರು: ರಾಜ್ಯದಲ್ಲಿ ಯಾವುದೇ ಚುನಾವಣೆ ಇದ್ದರೂ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಕಾಂಗ್ರೆಸ್ ಪಕ್ಷದ ಸೋಲು ಎಂಬುದು ತೀರ್ಮಾನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಂದು ನಡೆದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ, ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಯಿಂದ ಇದು ಸಾಬೀತಾಗಿದೆ. ಹಿಂದಿ ಉಪ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗರಿಷ್ಠ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ದೇಶ, ರಾಜ್ಯಗಳಲ್ಲಿ ಬಿಜೆಪಿ ನಿರಂತರ ಗೆಲುವು ಸಾಧಿಸುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರೇ ಕಾರಣ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಸರ್ಕಾರದ ಅತ್ಯುತ್ತಮ ಯೋಜನೆಗಳು ಪಕ್ಷದ ಗೆಲುವಿಗೆ ಸಹಕಾರಿಯಾಗಲಿವೆ. ಪಕ್ಷದ ಅಭೂತಪೂರ್ವ ಗೆಲುವಿಗೆ ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು ಶ್ರಮಿಸಬೇಕು ಎಂದು ಅವರು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


