ರಾಜ್ಯ

ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕಿರ್ ಬಂಧನ

ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕಿರ್ ಬಂಧನ
ಡಿ ಜೆ ಹಳ್ಳಿ ಗಲಭೆ ಪ್ರಕರಣ
Published On :

ಬೆಂಗಳೂರು: ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು. ಈಗ ಕಾಂಗ್ರೆಸ್ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸುವ ಮೂಲಕ ಮಹತ್ವದ ಬೆಳವಣಿಗೆಯಾಗಿದೆ. ಸಂಪತ್ ರಾಜ್ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ರಾಕಿಬ್ ಜಾಕೀರ್ ಪುಲಕೇಶಿನಗರ ವಾರ್ಡ್ ನ ಮಾಜಿ ಕಾರ್ಪೊರೇಟರ್. ಈತ ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಹೇಳಲಾಗುತ್ತಿದೆ. ಸಿಸಿಬಿ ಪೊಲೀಸರು ಈತನಿಗೆ ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದರು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ. 

ಜಾಕೀರ್ ಇರುವಿಕೆಯ ಸುಳಿವು ಪಡೆದ ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.