ರಾಜ್ಯ

ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ​ ಅಪಘಾತದಲ್ಲಿ ದುರ್ಮರಣ

ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ​ ಅಪಘಾತದಲ್ಲಿ ದುರ್ಮರಣ
ಮೃತ ಪೊಲೀಸ್ ಮುಖ್ಯಪೇದೆ ಸಿದ್ದರಾಮಪ್ಪ
Published On :

ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ. 48 ವರ್ಷದ ಸಿದ್ದರಾಮಪ್ಪ ಅಸುನೀಗಿದ್ದಾರೆ.

ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ಅವರು ಚಿಕ್ಕಮಗಳೂರು ನಗರದಲ್ಲಿ ವಾಸವಿದ್ದರು. ಬುಧವಾರ ಕರ್ತವ್ಯ ಮುಗಿಸಿ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುತ್ತಿದ್ದಾಗ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಬಳಿ ಕಾರು-ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಮಾಹಿತಿ ಸಿಕ್ಕಿದೊಡನೆ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲೆಯ ವಿವಿಧ ಠಾಣೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ಎಎಸ್‍ಐ ಆಗಬೇಕಿದ್ದ ಸಿಬ್ಬಂದಿಯನ್ನು ಕಳೆದುಕೊಂಡಿದ್ದರಿಂದ ಅವರ ಇಲಾಖೆ ಸಹೋದ್ಯೋಗಿಗಳು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.