ರಾಜ್ಯ

ನಾವು ಹೊಸ ವರ್ಷಾಚರಣೆ ಮೋಜಿನ ಪರ ಅಲ್ಲ, ನಮ್ಮ ನಿಲುವು ಈಗಲು ಸ್ಪಷ್ಟವಾಗಿದೆ: ಬಿಬಿಎಂಪಿ

ಹೊಸ ವರ್ಷಾಚರಣೆ ಸಂಭ್ರಮಾಚರಣೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಈ ವರೆಗೂ ಯಾವುದೇ ಸ್ಪಷ್ಟ ಆದೇಶಗಳನ್ನು ಹೊರಡಿಸಿಲ್ಲ. ಆದರೆ, ಬಿಬಿಎಂಪಿ ಮಾತ್ರ ಸ್ಪಷ್ಟ ನಿರ್ಧಾರಗಳನ್ನು ಕೈಗೊಂಡಿದ್ದು, ಹೊಸವರ್ಷಾಚರಣೆಯ ಮೋಜಿನ ಪರವಾಗಿ ಈಗಲೂ ಇಲ್ಲ ಎಂದು ತಿಳಿಸಿದೆ.

ನಾವು ಹೊಸ ವರ್ಷಾಚರಣೆ ಮೋಜಿನ ಪರ ಅಲ್ಲ, ನಮ್ಮ ನಿಲುವು ಈಗಲು ಸ್ಪಷ್ಟವಾಗಿದೆ: ಬಿಬಿಎಂಪಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮಾಚರಣೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಈ ವರೆಗೂ ಯಾವುದೇ ಸ್ಪಷ್ಟ ಆದೇಶಗಳನ್ನು ಹೊರಡಿಸಿಲ್ಲ. ಆದರೆ, ಬಿಬಿಎಂಪಿ ಮಾತ್ರ ಸ್ಪಷ್ಟ ನಿರ್ಧಾರಗಳನ್ನು ಕೈಗೊಂಡಿದ್ದು, ಹೊಸವರ್ಷಾಚರಣೆಯ ಮೋಜಿನ ಪರವಾಗಿ ಈಗಲೂ ಇಲ್ಲ ಎಂದು ತಿಳಿಸಿದೆ.  

ಹೊಸ ವರ್ಷದ ಮೊದಲ ದಿನದದಂದು ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ವಿಠಲ್ ಮಲ್ಯ ರಸ್ತೆ, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ಇನ್ನಿತರ ಕಡೆ ಸಾರ್ವಜನಿಕವಾಗಿ ಅದ್ಧೂರಿ ಕಾರ್ಯಕ್ರಮ ನಿಷೇದಿಸಬೇಕು. ಅದೇ ರೀತಿ ಪಬ್, ಹೋಟೆಲ್ ಹಾಗೂ ರೆಸ್ಟೋರೆಂಟ್'ಗಳಲ್ಲಿ ಪಾರ್ಟಿ, ಕ್ಲಬ್'ಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ ಸಮಾರಂಭ ಆಯೋಜನೆಗೆ ಅವಕಾಶ ನೀಡಬಾರದೆಂದು ಬಿಬಿಎಂಪಿ ಆಯುಕ್ತರು ಸರ್ಕಾರಕ್ಕೆ ಕೋರಿದ್ದಾರೆ. 
 
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಗಣೇಶ ಹಬ್ಬ, ದಸರಾ, ದೀಪಾವಳಿ ಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಮಾಡದಂತೆ ಹಾಗೂ ಹೆಚ್ಚು ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಪರಿಣಾಮ ನಗರದಲ್ಲಿ ಕೊರೋನಾ ಸೋಂಕಿನ ಪ್ರಮಾಣ 6000-7000ಕ್ಕೆ ಇಳಿಕೆಯಾಗಿದೆ. ಇದೀಗ ಚಳಿಗಾಲ ಇರುವುದರಿಂದ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ, ರಸ್ತೆಗಳಲ್ಲಿ ಹಾಗೂ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶ ನೀಡುವುದು ಬೇಡವೆಂದು ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ. 

ಹೊಸ ವರ್ಷದಂದು ಹೋಟೆಲ್, ಕ್ಲಬ್-ಪಬ್ ಹಾಗೂ ರೆಸ್ಟೋರೆಂಟ್'ಗಳಲ್ಲಿ ಸದ್ಯ ಜಾರಿಯಲ್ಲಿರುವ ಕೊರೋನಾ ಸೋಂಕಿನ ಮಾರ್ಗಸೂಚಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಿಕೊಂಡು (ಸ್ಯಾನಿಟೈಜಿಂಗ್, ಸಾಮಾಜಿಕ ಅಂತರ) ನಡೆಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಆದರೆ, ಹೆಚ್ಚು ಜನ ಸೇರುವುದು, ವಿಶೇಷ ಕಾರ್ಯಕ್ರಮ ಆಚರಣೆ ಬೇಡ ಎಂಬ ಅಭಿಪ್ರಾಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಸರ್ಕಾರ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿ ಎಂದು ತಿಳಿಸಿದ್ದಾರೆ. 

ಕೊರೋನಾ 2ನೇ ಅಲೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ತಜ್ಞರ ಸಮಿತಿ ಹೇಳಿದೆ. ಪ್ರಸ್ತುತ ರಾಜ್ಯದಲ್ಲಿ ಸೋಂಕು ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಸೆಕ್ಷನ್ 144 ಜಾರಿಗೊಳಿಸಲು ಚಿಂದನೆಗಳು ನಡೆಯುತ್ತಿವೆ ಎಂದು ಬಿಬಿಎಂಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ನಡುವೆ ಇತ್ತೀಚೆಗಷ್ಟೇ ಬಿಬಿಎಂಪಿ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾ ಆಯುಕ್ತರಿಗೆ ಜನಸಂದಣಿ ನಿಭಾಯಿಸಲು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಸೆಕ್ಷನ್ 144 ಜಾರಿಗೊಳಿಸುವ ಅಧಿಕಾರವಿದೆ ಎಂದು ತಿಳಿಸಲಾಗಿದೆ. 

ಚಳಿಗಾಲದಲ್ಲಿ ಕೊರೋನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದ ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಚಾರಣೆ ನಿಷೇದಿಸುವಂತೆ ಬಿಬಿಎಂಪಿ ರಾಜ್ಯ ಸರ್ಕಾರಕ್ಕೆ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.