ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ
ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತಿಬ್ಬರು ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತಿಬ್ಬರು ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ನ.27ರಂದು ಕದ್ರಿ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ "ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ.'' ಅಲ್ಲದೆ 'ಲಷ್ಕರ್ ಝಿಂದಾಬಾದ್' ಎಂದು ಬರೆಯಲಾಗಿತ್ತು.
ಬಳಿಕ ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ "Gustak e rasool ek hi saza tan say juda" ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆಯು ದೇಹದಿಂದ ಬೇರ್ಪಡುವುದು ಎಂಬ ಅರ್ಥ ನೀಡುವ ಬರವಣಿಗೆ ಇದಾಗಿದೆ.
ಪ್ರಕರಣ ದಾಖಲಿಸಿಕೊಂಡಿದ್ದ ಕದ್ರಿ ಪೊಲೀಸರು ನಾಲ್ಕು ತಂಡಗಳಾಗಿ ಆರೋಪಿಗಳ ಪತ್ತೆಗೆ ಕಾರ್ಯ ಆರಂಭಿಸಿದ್ದು, ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗದ ತೀರ್ಥಹಳ್ಳಿಯ ನಝೀರ್ ಮೊಹಮ್ಮದ್ (26) ಎಂಬಾತನನ್ನು ಬಂಧನಕ್ಕೊಳಪಡಿಸಿತ್ತು. ಈತನನ್ನು ವಿಚಾರಣೆಗೊಳಪಡಿಸಿದಾಗ ಕೆಲ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆಂದು ತಿಳಿದುಬಂದಿದೆ.
ಈತ ನೀಡಿದ ಮಾಹಿತಿ ಮೇರೆಗೆ ಇದೀಗ ಪೊಲೀಸರು ಬೆಂಗಳೂರು ಹಾಗೂ ತೀರ್ಥಹಳ್ಳಿಯಿಂದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


