ಬಾಗಲಕೋಟೆ: ಬಿಜೆಪಿ ಶಾಸಕ ಸಿದ್ದು ಸವದಿ ರಾಜಿನಾಮೆಗೆ ಆಗ್ರಹಿಸಿ ಕೆಪಿಸಿಸಿ ಪ್ರತಿಭಟನೆ
ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿಯಿಂದ ತಳ್ಳಾಟಕ್ಕೆ ಒಳಗಾಗಿದ್ದ ಮಹಿಳಾ ಸದಸ್ಯೆ ಚಾಂದಿನಿ ನಾಯ್ಕ್ ಆವರಿಗೆ ಗರ್ಭಪಾತವಾಗಿದ್ದು, ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ.

ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿಯಿಂದ ತಳ್ಳಾಟಕ್ಕೆ ಒಳಗಾಗಿದ್ದ ಮಹಿಳಾ ಸದಸ್ಯೆ ಚಾಂದಿನಿ ನಾಯ್ಕ್ ಆವರಿಗೆ ಗರ್ಭಪಾತವಾಗಿದ್ದು, ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ.
ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯನ್ನು ತಳ್ಳಿದ್ದರಿಂದ ಆಕೆಗೆ ಗರ್ಭಪಾತವಾಗಿದೆ. ಹೀಗಾಗಿ ಘಟನೆಯನ್ನು ಖಂಡಿಸಿ ಮಹಾಲಿಂಗಪುರದಲ್ಲಿ ಡಿಸೆಂಬರ್ 5ಕ್ಕೆ ರಾಜ್ಯ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ನಿಧಾ೯ರ ಮಾಡಿದೆ. ಉಮಾಶ್ರೀ ಅವರು ಪುರಸಭಾ ಸದಸ್ಯೆ ಚಾಂದಿನಿ ನಾಯ್ಕ್ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಮಹಾಲಿಂಗಪುರ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ವೇಳೆ ಅಕ್ಟೋಬರ್ 9ರ ಸೋಮವಾರ ಗಲಾಟೆ ನಡೆದಿತ್ತು. ಬಿಜೆಪಿಯ ಮೂವರು ಸದಸ್ಯೆಯರು ಕಾಂಗ್ರೆಸ್‌ಗೆ
ಬೆಂಬಲ ನೀಡಿದ್ದರಿಂದ ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ಎದುರಾಗಿತ್ತು. ಮೂವರು ಸದಸ್ಯೆಯರು ಸಭೆಗೆ ಬಾರದಂತೆ ತಡೆಯಲು ಶಾಸಕ ಸಿದ್ದು ಸವದಿ ಹಾಗೂ ಬಿಜೆಪಿ ಕಾರ್ಯಕರ್ತರು ಸದಸ್ಯೆಯರನ್ನು ತಳ್ಳಾಡಿದ್ದರು.
ನಾನು ಯಾವುದೇ ಮಹಿಳಾ ಕೌನ್ಸಿರಲ್ ಅನ್ನು ತಳ್ಳಿಲ್ಲ, ವಿರೋಧಿ ಸದಸ್ಯರಿಂದ ನಾನು ಅವರನ್ನು ರಕ್ಷಿಸಲು ಮುಂದಾಗಿದ್ದೆ, ನಾನು ಎಳೆದಾಡಿದ್ದರಿಂದ ಚಾಂದಿನಿ ನಾಯ್ಕ್ ಅವರಿಗೆ ಗರ್ಭಪಾತವಾಗಿದೆ ಎಂಬುದು ಸುಳ್ಳು ಆರೋಪ ಎಂದು ಶಾಸಕ ಸಿದ್ದು ಸವದಿ ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಸಿದ್ದು ಸವದಿ ಎಳೆದಾಡಿದ್ದರಿಂದ ನನ್ನ ಪತ್ನಿಗೆ ಗರ್ಭಪಾತವಾಗಿದೆ ಎಂದು ನಾನು ಹೇಳಿಯೇ ಇಲ್ಲ ಎಂದು ಚಾಂದಿನಿ ನಾಯ್ಕ್ ಪತಿ ನಾಗೇಶ್ ಹೇಳುವ ಮೂಲಕ ತಮ್ಮ ಆರೋಪವನ್ನು ವಾಪಸ್ ಪಡೆದಿದ್ದಾರೆ. ನಾಗೇಶ್ ತಮ್ಮ ಆರೋಪವನ್ನು ವಾಪಸ್ ಪಡೆದಿದ್ದಾರೆ ಆದರೆ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯನಮಠ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


