ತುಮಕೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು
ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ನಡೆದಿದೆ.

ತುಮಕೂರು: ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಗೌರಿಪುರದ ವಿಕಾಸ್ (24) ಎಡಗಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಗುಂಡೇಟು ತಿಂದ ಆರೋಪಿ ರೌಡಿಶೀಟರ್ ಮಂಜನಾಥ್ (32) ಅಲಿಯಾಸ್ ಉಚ್ಚೆಮಂಜನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದನು.
ತುಮಕೂರು ತಾಲೂಕು ಅಜ್ಜಪ್ಪನಹಳ್ಲಿಯ ಸಮುದಾಯ ಭವನದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಗುಬ್ಬಿ ತಾಲೂಕಿನ ಗೌರಿಪುರದ ವಿಕಾಸ್ ಅಲಿಯಾಸ್ RX ವಿಕ್ಕಿ (24)ಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಆತ ಮುಂದಾದಾಗ ತಿಲಕ್ ಪಾರ್ಕ್ ಠಾಣೆ ಪಿಎಸ್ ಐ ನವೀನ್ ಗುಂಡು ಹಾರಿಸಿದ್ದಾರೆ.
ಆರೋಪಿ ವಿಕ್ಕಿ ಹಾಗೂ ಎಡಕೈ ತೋಳಿಗೆ ಗಾಯಗೊಂಡಿರುವ ಎಎಸ್_ಐ ಪರಮೇಶ್ವರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


