ರಾಜಕೀಯಕ್ಕೆ ರಜಿನಿಕಾಂತ್: ಬೆಂಗಳೂರಿನ ಸಹೋದರನ ನಿವಾಸಕ್ಕೆ ಸೂಪರ್ ಸ್ಟಾರ್ ದಿಢೀರ್ ಭೇಟಿ!
ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿ ನಿಂತಿರುವ ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ದಿಢೀರನೆ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು.

ಬೆಂಗಳೂರು: ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿ ನಿಂತಿರುವ ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ದಿಢೀರನೆ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು.
ಹೌದು..ನಟ ರಜನಿಕಾಂತ್ ನಿನ್ನೆ ಬೆಂಗಳೂರಿನಲ್ಲಿರುವ ತಮ್ಮ ಹಿರಿಯ ಸಹೋದರ ಸತ್ಯನಾರಾಯಣ ಅವರ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು. ಈ ವೇಳೆ ಸಾಕಷ್ಟು ಹೊತ್ತು ಕುಳಿತು ರಜನಿಕಾಂತ್ ಮತ್ತು ಸತ್ಯನಾರಾಯಣ ಅವರು ಉಭಯ ಕುಶಲೋಪರಿ ವಿಚಾರಿಸಿದರು.
ಇದೇ ಡಿಸೆಂಬರ್ 3ರಂದು ನಟ ರಜನಿಕಾಂತ್ ಜನವರಿಯಲ್ಲಿ ಹೊಸ ಪಕ್ಷ ಘೋಷಣೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ ಡಿಸೆಂಬರ್ 31ರಂದು ಹೊಸ ಪಕ್ಷ ಕಟ್ಟುವ ಕುರಿತ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿದ್ದ ರಜನಿಕಾಂತ್, 'ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವಾಗಲೂ ಸಾಧ್ಯವಿಲ್ಲ ಎಂದಿದ್ದಾರೆ. ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಈ ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡಲಾಗುವುದು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಜನರ ಬೆಂಬಲದೊಂದಿಗೆ ಧಾರ್ಮಿಕ ರಾಜಕೀಯ ತಮಿಳು ನಾಡಿನಲ್ಲಿ ಆರಂಭವಾಗಲಿದೆ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


