ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ: ಶೇ.60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
ರಾಜ್ಯದ ಮೊದಲ ರಾಷ್ಟ್ರೀಯ ಯೋಜನೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ರೂ.21,473 ಕೋಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಿ ಶೇ.60:40ರಷ್ಟು ಅನುದಾನದ ಅನುಪಾತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದ ಮೊದಲ ರಾಷ್ಟ್ರೀಯ ಯೋಜನೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ರೂ.21,473 ಕೋಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಿ ಶೇ.60:40ರಷ್ಟು ಅನುದಾನದ ಅನುಪಾತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಜನಸಂಪನ್ಮೂಲ ಸಚಿವ ರಮೇಶಅ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಈಗಾಗಲೇ ಸಮ್ಮತಿಸಿದ್ದಾರೆ. ಅದಕ್ಕೆ ಅಗತ್ಯವಿರುವ ತಾಂತ್ರಿಕ ಪ್ರಕ್ರಿಯೆ ಪೂರ್ಣಗೊಳಿಸುವ ಸಲುವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಅದರಂತೆ ರಾಜ್ಯದ ಮಧ್ಯ ಭಾಗದಲ್ಲಿ ಬರುವ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಘೋಷಿಸಲಿದೆ. ನಂತರ ಒಟ್ಟು ಅನುದಾನದ ಶೇ.60 ರಷ್ಟು ಹಣಕಾಸಿನ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ. ಉಳಿದ ಶೇ.40ರಷ್ಟು ಪಾಲಿನ ಅನುದಾನಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ದಶಕದಿಂದ ಕುಂಟುತ್ತಾ ಸಾಗಿರುವ ಈ ಯೋಜನೆಗೆ ಕೇಂದ್ರ ಸರ್ಕಾರ ದೊಡ್ಡ ಆರ್ಥಿಕ ನೆರವು ಬಂದಿದ್ದೇ ಆದರೆ, ಶೀಘ್ರ ಪೂರ್ಣಗೊಳ್ಳಲಿದೆ ಎಂಬು ಆಶಾಭವನೆ ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಚಿಕ್ಕಮಗಳೂರಿನ ಕೆಲ ಭಾಗಗಳ ಜನರಲ್ಲಿ ಮೂಡಿದೆ.
ಈ ಜಿಲ್ಲೆಗಳ 2.25 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ಭದ್ರಾ ಮೇಲ್ದಂಡೆ ನೀರುಣಿಸಲಿದೆ. 2 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಒಳಗೊಳ್ಳುವ ನೀರಾವರಿ ಯೋಜನೆಗೆ ಮಾತ್ರ ಕೇಂದ್ರ ರಾಷ್ಟ್ರೀಯ ಯೋಜನೆಯೆಂಬ ಮಾತ್ರ ಕೇಂದ್ರ ರಾಷ್ಟ್ರೀಯ ಯೋಜನೆಯೆಂಬ ಮಾನ್ಯತೆಗೆ ಅವಕಾಶವಿದೆ. ಈ ಯೋಜನೆಯಿ ಕೇವಲ ಹನಿ ನೀರಾವರಿಯನ್ನು ಮಾತ್ರ ಕೈಗೊಳ್ಳಲಾಗುತ್ತದೆ ಎಂಬುದು ಮತ್ತೊಂದು ವಿಶೇಷವಾಗಿದೆ.
ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ ಕಾಲುವೆಗಳ ಮೂಲಕ ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 2.25 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಯೋಜನೆ. 2000ನೇ ಇಸ್ವಿಯಲ್ಲಿ ಯೋಜನೆಗೆ ಶ್ರೀಕಾರ ಬಿದ್ದು, 2003ರಲ್ಲಿ ಆಡಳಿತಾತ್ಮಕ ಒಪ್ಪಿಗೆ ದೊರೆತು, ರೂ.2813 ಕೋಟಿ ಯೋಜನಾ ವೆಚ್ಚ ತಯಾರಿಸಲಾಗಿತ್ತು. ಭೂ ಸ್ವಾಧೀನ ಹಾಗೂ ಅಱಣ್ಯ ಸಂಬಂಧಿ ಅನುಮತಿ ವಿಳಂಬವಾಗಿ, ಯೋಜನೆಯ ಸ್ವರೂಪ ಹನಿ ನೀರಾವರಿಯಾಗಿ ಬದಲಾಗಿ, ಜಿಎಸ್'ಟಿ ಕೂಡ ಸೇರಿ ಈ ಗ ಯೋಜನಾ ವೆಚ್ಚ ರೂ.21,473 ಕೋಟಿಗೆ ಏರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


