ಕಾರು ಅಪಘಾತ: ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಮೃತ್ಯು
ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಕಾರು ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.

ಕುಂದಾಪುರ: ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ್ ಶೆಟ್ಟಿ ಕಾರು ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.
ಕುಂದಾಪುರದ ಹಾಲಾಡಿ ಸೇತುವೆಗೆ ಕಾರು ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ. ಆ ವೇಳೆ ಕಾರಿನಲ್ಲಿದ್ದ ರಾಜೀವ್ ಶೆಟ್ಟಿ ಅಸುನೀಗಿದ್ದಾರೆ. ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಾಲಾಡಿಗೆ ಹಿಂತಿರುಗುತ್ತಿದ್ದರು. ಆ ಸಮಯ ನಿಯಂತ್ರಣ ತಪ್ಪಿದ ಕಾರು ಹಾಲಾಡಿ ಸೇತುವೆಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗಳಾಗಿದ್ದ ರಾಜೀವ್ ಅವರನ್ನು ತಕ್ಷಣ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ದಾರಿಯಲ್ಲೇ ಅವರು ಮೃತರಾಗಿದ್ದಾರೆ, ಕಾರಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ರಾಜೀವ್ ಶೆಟ್ಟಿ ಪ್ರಗತಿಪರ ರೈತ ಮತ್ತು ಹಾಲು ಉತ್ಪಾದಕರಾಗಿದ್ದರು. ಅವರು ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು ಮತ್ತು ಶಂಕರನಾರಾಯಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಮತ್ತು ನಿರ್ದೇಶಕರಾಗಿದ್ದರು.
ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿದ್ದ ರಾಜೀವ್ ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಅವರು ವಿವಿಧ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು ಬಿಜೆಪಿಯ ಪ್ರಭಾವಿ ನಾಯಕರಾಗಿದ್ದರು.
ಮೃತರು ಪತ್ನಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮಮತಾ ಶೆಟ್ಟಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


