ರಾಜ್ಯ

ಕೇಂದ್ರ ಸರ್ಕಾರದ ಸುಧಾರಣಾ ಕೃಷಿ ಮಸೂದೆಗೆ ವಿರೋಧ: ಇಂದು ವಿಧಾನಸೌಧಕ್ಕೆ ರೈತರ ಮುತ್ತಿಗೆ

ಭಾರತ ಬಂದ್ ಬೆಂಗಳೂರು ನಗರ ಪ್ರದೇಶದ ಜನರ ಮೇಲೆ ನಿನ್ನೆ ಹೆಚ್ಚಿನ ಪರಿಣಾಮ ಬೀರದಿದ್ದಿರಬಹುದು. ಆದರೆ ಹಲವು ರೈತ ಸಂಘಟನೆಗಳ ಸುಮಾರು 10 ಸಾವಿರ ಮಂದಿ ಇಂದು ಅಂದರೆ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಿಂದ ವಿಧಾನಸೌಧಕ್ಕೆ ರ್ಯಾಲಿ ಹಮ್ಮಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ಸುಧಾರಣಾ ಕೃಷಿ ಮಸೂದೆಗೆ ವಿರೋಧ: ಇಂದು ವಿಧಾನಸೌಧಕ್ಕೆ ರೈತರ ಮುತ್ತಿಗೆ
ನಿನ್ನೆ ಭಾರತ ಬಂದ್ ಆಚರಣೆ ವೇಳೆ ಕಂಡುಬಂದ ಪ್ರತಿಭಟನೆಯ ದೃಶ್ಯ
Published On :

ಬೆಂಗಳೂರು: ಭಾರತ ಬಂದ್ ಬೆಂಗಳೂರು ನಗರ ಪ್ರದೇಶದ ಜನರ ಮೇಲೆ ನಿನ್ನೆ ಹೆಚ್ಚಿನ ಪರಿಣಾಮ ಬೀರದಿದ್ದಿರಬಹುದು. ಆದರೆ ಹಲವು ರೈತ ಸಂಘಟನೆಗಳ ಸುಮಾರು 10 ಸಾವಿರ ಮಂದಿ ಇಂದು ಅಂದರೆ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಿಂದ ವಿಧಾನಸೌಧಕ್ಕೆ ರ್ಯಾಲಿ ಹಮ್ಮಿಕೊಂಡಿದ್ದು ಇದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ರೈತಪರ, ಕನ್ನಡಪರ ಸಂಘಟನೆಗಳು ಇಂದಿನ ಜಾಥಾದಲ್ಲಿ ಭಾಗಿಯಾಗಲಿದ್ದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ರ್ಯಾಲಿ ಆರಂಭಿಸಿ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಮನವಿ ಸ್ವೀಕರಿಸಲು ಒಪ್ಪದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣ ಗೌಡ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಸುಧಾರಣಾ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಇಂದು ಬೃಹತ್ ರ್ಯಾಲಿ, ಜಾಥಾ ಹಮ್ಮಿಕೊಂಡಿದ್ದು ಶೇಷಾದ್ರಿ ರಸ್ತೆ, ಟೌನ್ ಹಾಲ್ ಮತ್ತು ಮೈಸೂರು ಬ್ಯಾಂಕ್ ಸರ್ಕಲ್ ಗಳ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ವಿಧಾನಸೌಧಕ್ಕೆ ಮುತ್ತಿಗೆ: ಇಂದಿನ ರ್ಯಾಲಿಯಲ್ಲಿ 5ರಿಂದ 10 ಸಾವಿರ ರೈತರು ಭಾಗವಹಿಸುವ ಸಾಧ್ಯತೆಯಿದ್ದು 10.30 ಸುಮಾರಿಗೆ ಬಿಬಿಬಎಂಪಿ ಕಚೇರಿ ಮುಂಭಾಗದಿಂದ ರ್ಯಾಲಿ ಆರಂಭಿಸಿ ವಿಧಾನಮಂಡಲ ಚಳಿಗಾಲ ಅಧಿವೇಶನ ನಡೆಯುತ್ತಿರುವುದರಿಂದ ವಿಧಾನ ಸೌಧಕ್ಕೆ ಮುತ್ತಿಗೆ ಹಾಕುವ ಯೋಜನೆಯಲ್ಲಿ ರೈತರಿದ್ದಾರೆ. 

ಇದರಿಂದಾಗಿ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೆ ಕೆ ಆರ್ ಸರ್ಕಲ್, ಮೈಸೂರು ಬ್ಯಾಂಕ್ ವೃತ್ತ, ಶೇಷಾದ್ರಿ ರಸ್ತೆ, ವಿಧಾನಸೌಧ, ರಾಜಭವನ, ಸ್ವಾತಂತ್ರ್ಯ ಉದ್ಯಾನವನ ಸುತ್ತಮುತ್ತ ತೀವ್ರ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.