ರಾಜ್ಯ

ಕನ್ನ ಕಳವು ಮಾಡುತ್ತಿದ್ದ ಆರೋಪಿ ಬಂಧನ: 55 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಕುಖ್ಯಾತ ಕನ್ನ ಕಳವು ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅರ್ಧ ಕೆಜಿ ಚಿನ್ನಾಭರಣ ಮತ್ತು 31 ಕೆಜಿ ತೂಕದ ಬೆಳ್ಳಿಯ ಅಭರಣಗಳು ಸೇರಿದಂತೆ 55 ಲಕ್ಷ ರೂಪಾಯಿ ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಕನ್ನ ಕಳವು ಮಾಡುತ್ತಿದ್ದ ಆರೋಪಿ ಬಂಧನ: 55 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕುಖ್ಯಾತ ಕನ್ನ ಕಳವು ಮಾಡುತ್ತಿದ್ದ ಆರೋಪಿಯನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ  ಅರ್ಧ ಕೆ. ಜಿ. ಚಿನ್ನಾಭರಣ ಮತ್ತು 31 ಕೆ. ಜಿ. ತೂಕದ ಬೆಳ್ಳಿಯ ಅಭರಣಗಳು ಸೇರಿದಂತೆ 55 ಲಕ್ಷ ರೂಪಾಯಿ ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆ.ಎಸ್. ಲೇಔಟ್ ನ ಚಂದ್ರಾನಗರ ಪೈಪ್ ಲೈನ್ ನಿವಾಸಿ ರವಿಶಂಕರ್ (25) ಬಂಧಿತ ಆರೋಪಿ. ಈತ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳ ಕಳವು ಮಾಡಿ ತಲೆ ಮರೆಸಿಕೊಂಡಿದ್ದ.

ಹಲಸೂರು ಗೇಟ್, ಕೆ.ಆರ್. ಪುರಂ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ, ಹನುಮಂತನಗರ, ಶಿಡ್ಲಘಟ್ಟ, ಸೋಲದೇವನಹಳ್ಳಿ ಪೊಲೀಸ್  ಠಾಣೆ ವ್ಯಾಪ್ತಿಗಳಲ್ಲಿ ಕನ್ನ ಕಳವು ಮಾಡಿದ್ದ ಸುಮಾರು 7 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿವೆ.

55 ಲಕ್ಷ ರೂಪಾಯಿ ಮೌಲ್ಯದ 501 ಗ್ರಾಂ ತೂಕದ ಚಿನ್ನದ ಒಡವೆಗಳು ಮತ್ತು 31  ಕೆ. ಜಿ. ತೂಕದ ಬೆಳ್ಳಿಯ ವಸ್ತುಗಳನ್ನು ತನಿಖೆಯ ವೇಳೆಯಲ್ಲಿ ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.