ರಾಜ್ಯ

ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದ ಗೋವಿಂದ ಕಾರಜೋಳ

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ತಮಗೆ ನೀಡಿದ್ದ ಬಂಗಾರದ ಕಿರೀಟವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಗುರುವಾರ ವಿಧಾನಸೌಧದಲ್ಲಿ ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದ ಗೋವಿಂದ ಕಾರಜೋಳ
ಗೋವಿಂದ್ ಕಾರಜೋಳ - ವಿಜಯಬಾಸ್ಕರ್
Published On :

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ತಮಗೆ ನೀಡಿದ್ದ ಬಂಗಾರದ ಕಿರೀಟವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಗುರುವಾರ ವಿಧಾನಸೌಧದಲ್ಲಿ ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ನಂತರ ಮಾತನಾಡಿದ ಗೋವಿಂದ ಕಾರಜೋಳ, ತಮ್ಮ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ತಾವು ಈ ಗ್ರಾಮದ ಅಭಿವೃದ್ಧಿಗಾಗಿ ಸಲ್ಲಿಸಿದ ಗಣನೀಯ ಸೇವೆ, ಗ್ರಾಮದ ಅಭಿವೃದ್ಧಿಗಾಗಿ ಅತ್ತ್ಯುತ್ತಮ ಯೋಜನೆಗಳ ಅನುಷ್ಠಾನ, ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ, ತಮ್ಮೂರಿನ ಮನೆಯ ಮಗ ಉಪಮುಖ್ಯಮಂತ್ರಿಯಾಗಿದ್ದಕ್ಕಾಗಿ ಪ್ರೀತಿ ಗೌರವದಿಂದ ಈ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು ಎಂದರು.

ಕಳೆದ 6 ವರ್ಷಗಳಿಂದ ಸನ್ಮಾನ ಮಾಡಿ, ಸಮರ್ಪಿಸಲು ಪ್ರಯತ್ನಿಸಿದ್ದರು. ಆದರೆ ಸಾಧ್ಯವಾಗಿರಲಿಲ್ಲ. ನವೆಂಬರ್ 23 ರಂದು ಈ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ದಿ ಕಾರ್ಯಕ್ರಮದಲ್ಲಿ ಒತ್ತಾಯ ಪೂರ್ವಕವಾಗಿ ಅಭಿಮಾನ, ಪ್ರೀತಿ ವಿಶ್ವಾಸ, ಗೌರವದಿಂದ  ಸನ್ಮಾನಿಸಿ, ಈ ಚಿನ್ನದ ಕಿರೀಟವನ್ನು ನೀಡಿದರು ಎಂದು ಡಿಸಿಎಂ ಹೇಳಿದರು.

ತಾವು ಶಾಸಕ, ಮಂತ್ರಿಯಾಗಿ ಮಾಡಿದ ಸೇವೆಯನ್ನು ಪರಿಗಣಿಸಿ ಪೀತಿ, ಗೌರವದಿಂದ ಸನ್ಮಾನಿಸಿದ್ದು, ಈ ಸನ್ಮಾನವು  ಸರ್ಕಾರಕ್ಕೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಈ ಬಂಗಾರದ ಕಿರೀಟವನ್ನು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.