ರಾಜ್ಯ

ವಿಜಯಪುರ: ಕಲ್ಯಾಣ ಮಂಟಪದಿಂದ ಆಗಮಿಸಿ ಪಂಚಾಯತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಧುಮಗ

ಮಧುಮಗನೋರ್ವ ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆಯೊಂದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ: ಕಲ್ಯಾಣ ಮಂಟಪದಿಂದ ಆಗಮಿಸಿ ಪಂಚಾಯತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಧುಮಗ
ಸಂಗ್ರಹ ಚಿತ್ರ
Published On :

ವಿಜಯಪುರ: ಮಧುಮಗನೋರ್ವ ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆಯೊಂದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.

ಗ್ರಾ.ಪಂಚಾಯತ್ ಚುನಾವಣೆಗೆ ಗ್ರಾಮದ ನಿವಾಸಿ ಮಕ್ಬುಲ್ ಬನ್ನೆಟ್ಟಿ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. 

ಇಂದು ಮಕ್ಬುಲ್ ಬನ್ನೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮಧ್ಯಾಹ್ನ 2.55ಕ್ಕೆ ಬಿದರಕುಂದಿ ಗ್ರಾಪಂ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೃತ್ತಿಯಲ್ಲಿ ನಾನೋರ್ವ ಪತ್ರಕರ್ತನಾಗಿದ್ದು, ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಅರಿತಿದ್ದೇನೆ. ಹೀಗಾಗಿ ಸಮಸ್ಯೆಗಳ ಸುಧಾರಣೆಗಾಗಿ ಪ್ರಾಮಾಣಿಕವಾಗಿ ದುಡಿಯಲು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.