ರಾಜ್ಯದಲ್ಲಿ ಇಳಿಮುಖವಾಗುತ್ತಿರುವ ಕೊರೋನಾ: ಬೆಂಗಳೂರಿನಲ್ಲಿ 701 ಸೇರಿ 1,238 ಹೊಸ ಪ್ರಕರಣಗಳು ಪತ್ತೆ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,238 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು 5,076 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,238 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು 5,076 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಇದರೊಡನೆ ರಾಜ್ಯದಲ್ಲಿ ಇದುವರೆಗೆ ಒಟ್ಟೂ ಕೋವಿಡ್ ಪೀಡಿತರ ಸಂಖ್ಯೆ 8,97,801ಗೆ ತಲುಪಿದೆ. ಅದರಲ್ಲಿ 8,66,664 ಮಂದಿ ಗುಣಮುಖವಾಗಿದ್ದಾರೆ. ಸಕ್ರಿಯ ಪ್ರಕರಣಗಳು 19,206 ಆಗಿದೆ.
ಇಂದು ಒಂದೇ ದಿನ ರಾಜ್ಯದಲ್ಲಿ 12 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದುವರೆಗೆ 11,912 ಮಂದಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ.
ಇನ್ನು ಬೆಂಗಳೂರು ನಗರದಲ್ಲಿ ಈ ದಿನ ಹೊಸದಾಗಿ 701 ಪ್ರಕರಣ ಪತ್ತೆಯಾಗಿದ್ದು ಒಟ್ಟೂ ಸೋಂಕಿತರ ಸಂಖ್ಯೆ 3,76,592ಗೆ ತಲುಪಿದೆ. ಇಂದು ನಗರದಲ್ಲಿ 8 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟೂ 4,218 ಮಂದಿ ಕೊರೋನಾ ಕಾರಣಕ್ಕೆ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


